ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವಗೆ ಶೋಕಾಸ್ ನೋಟಿಸ್, ಆಕೆಯ ಉತ್ತರದ ಆಧರಿಸಿ ಕ್ರಮ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

24-10-26 05:35 pm       HK News Desk   ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ನಡೆಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ ಬೆನ್ನಲ್ಲೇ, ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಬೆಂಗಳೂರು, ಅ‌.24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ನಡೆಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ ಬೆನ್ನಲ್ಲೇ, ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾಗೆ ಶೋಕಾಸ್ ನೋಟಿಸ್ ನೀಡಲಾಗಿದೆ. 

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, “ಇದು ರಾಜಕೀಯ ಸೇಡು ತೀರಿಸಿಕೊಳ್ಳಲು ಕೆಲವರು ಎಸಗಿರುವ ಹೀನ ಕೃತ್ಯವಾಗಿದೆ. ಇಂತಹ ಕೃತ್ಯಗಳು ನಡೆಯಬಾರದು ಎಂದು ಹೇಳುತ್ತಾ ಬಂದಿದ್ದೇನೆ. ಈ ಸ್ಟಿಂಗ್ ಆಪರೇಷನ್‌ನಲ್ಲಿ ಕಾಂಗ್ರೆಸ್ ಪಕ್ಷದವರು ಯಾರೇ ಭಾಗಿಯಾಗಿದ್ದರೂ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈಗಾಗಲೇ ಕೃಪಾ ಆಳ್ವಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಲಾಗಿದ್ದು, ನೋಟಿಸ್‌ಗೆ ನೀಡುವ ಉತ್ತರವನ್ನು ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಡಿಯೋದಲ್ಲಿ ಯಾರಿದ್ದಾರೆ ಮತ್ತು ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ಸಮಗ್ರ ತನಿಖೆ ನಡೆಸಲು ಸಿಐಡಿ ಹಾಗೂ ಸಿಬಿಐ ನಂತಹ ಸಂಸ್ಥೆಗಳಿವೆ. ಆ ರೀತಿ ತನಿಖೆಗೆ ಹೋದರೆ ಹಳೆಯ ಪ್ರಕರಣಗಳಿಂದಲೂ ತನಿಖೆ ನಡೆಸಬೇಕಾಗುತ್ತದೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್ ಬಿಜೆಪಿ ನಾಯಕರ ವಿರುದ್ಧವೂ ಕುಟುಕಿದ್ದಾರೆ. 

ವೈರಲ್ ಆಗಿರುವ ಸ್ಟಿಂಗ್ ವಿಡಿಯೋದಲ್ಲಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಮತ್ತು ಪವರ್ ಟಿವಿ ರಾಕೇಶ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಏಕಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದರು.