ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು, ಪುತ್ತೂರಿನ ಈಗಿನ ಶಾಸಕರೂ ಅದೇ ರೀತಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆಯೇ.? ಸತೀಶ್ ಕುಂಪಲ ಪ್ರಶ್ನೆ

24-10-26 08:06 pm       HK News Desk   ಕರಾವಳಿ

ರಾಜ್ಯದಲ್ಲಿ ನಡೆದಿರುವ ಸ್ಟಿಂಗ್ ಪ್ರಕರಣದಲ್ಲಿ ಪುತ್ತೂರಿನ ಹೆಸರು ಉಲ್ಲೇಖಗೊಂಡಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತಂದಿದೆ. ಸ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೇ ಭಾಗಿಯಾಗಿದ್ದು ಪುತ್ತೂರು ಕ್ಷೇತ್ರದ ಟಿಕೆಟ್ ಗಾಗಿ ನಡೆದಿದೆ ಎನ್ನುವುದು ಈ ಜಿಲ್ಲೆಗೆ ಕಪ್ಪು ಚುಕ್ಕೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ಮಂಗಳೂರು, ಅ.24: ರಾಜ್ಯದಲ್ಲಿ ನಡೆದಿರುವ ಸ್ಟಿಂಗ್ ಪ್ರಕರಣದಲ್ಲಿ ಪುತ್ತೂರಿನ ಹೆಸರು ಉಲ್ಲೇಖಗೊಂಡಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತಂದಿದೆ. ಸ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೇ ಭಾಗಿಯಾಗಿದ್ದು ಪುತ್ತೂರು ಕ್ಷೇತ್ರದ ಟಿಕೆಟ್ ಗಾಗಿ ನಡೆದಿದೆ ಎನ್ನುವುದು ಈ ಜಿಲ್ಲೆಗೆ ಕಪ್ಪು ಚುಕ್ಕೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. 

ಸ್ಟಿಂಗ್ ಪ್ರಕರಣದಲ್ಲಿ ಪುತ್ತೂರಿನ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪುತ್ತೂರಿನ ಈಗಿನ ಶಾಸಕರೂ ಅದೇ ರೀತಿಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆಯೇ ಎಂಬ ಶಂಕೆ ಬರುತ್ತಿದೆ ಎಂದು ಹೇಳಿದ ಕುಂಪಲ, ಸ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೇ ಇದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಈ ಸ್ಟಿಂಗ್ ನಡೆದಿದೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.‌ ಈ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ತನಿಖೆ ನಡೆದು, ಸತ್ಯಾಸತ್ಯತೆ ಜನತೆಗೆ ತಿಳಿಯಬೇಕಾಗಿದೆ. 

ಪ್ರಕರಣ 2011ರಲ್ಲಿ ನಡೆದಿದ್ದರೂ, 2023ರ ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ಗಾಗಿ ಈ ಪ್ರಕರಣವನ್ನು ಬಳಸಲಾಗಿದೆ ಎಂದು ಹೇಳಲಾಗಿದೆ. ಈ ಪ್ರಕರಣವನ್ನು ದಾಳವಾಗಿ ಬಳಸಿ ಚುನಾವಣೆಯಲ್ಲಿ ಯಾರ‍್ಯಾರು ಟಿಕೆಟ್ ಪಡೆದುಕೊಂಡಿದ್ದಾರೆ?ಇದರಲ್ಲಿ ಯಾರ‍್ಯಾರು ಭಾಗಿಯಾಗಿದ್ದಾರೆ? ಯಾರ‍್ಯಾರ ಸ್ಟಿಂಗ್ ಆಗಿದೆ ಎಂಬ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಹೇಳಿದರು.  

ತಂದೆಯ ಹೆಸರನ್ನು ಕೆಡಿಸಲು ಈ ಸ್ಟಿಂಗ್ ನಡೆಸಲಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಇದನ್ನು ಕಾಂಗ್ರೆಸ್ ಟಿಕೆಟ್ ಪಡೆಯಲು ಮಾಡಿದ್ದಾರೆಂದು ಸುದ್ದಿಯಾಗಿದೆ. ಬೇರೆ ಕ್ಷೇತ್ರಗಳಲ್ಲೂ ಇದೇ ರೀತಿ ಟಿಕೆಟ್ ಪಡೆಯಲು ಸ್ಟಿಂಗ್ ನಡೆದಿರುವ ಅನುಮಾನವಿದೆ. ಈ ಬಗ್ಗೆ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ತನಿಖೆ ನಡೆದು, ಶೀಘ್ರದಲ್ಲಿ ವಾಸ್ತವ ವಿಚಾರ ತಿಳಿಯಬೇಕು ಎಂದು ಸತೀಶ್ ಕುಂಪಲ ಆಗ್ರಹಿಸಿದರು.