ಬ್ರೇಕಿಂಗ್ ನ್ಯೂಸ್
25-10-26 08:25 pm HK News Desk ಕರಾವಳಿ
ಬೆಂಗಳೂರು, ಅ.25: ರಾಜ್ಯದಲ್ಲಿ ಸ್ಟಿಂಗ್ ಕಾರಣದಿಂದ ಆಡಳಿತಾರೂಢ ಕಾಂಗ್ರೆಸ್ ತೀವ್ರ ಇರಿಸುಮುರಿಸಿಗೆ ಒಳಗಾಗಿರುವಾಗಲೇ 2028ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೇರಲಿದೆ ಎಂದು ಬಾರ್ ಡೇಟಾ - ವೋಟ್‌ಇಂಡಿಯಾ ಎನ್ನುವ ರಾಜಕೀಯ ವಿಶ್ಲೇಷಣಾ ಸಂಸ್ಥೆ ಭವಿಷ್ಯ ಹೇಳಿದೆ.
ಅಕ್ಟೋಬರ್ ಕೊನೆಯ ವಾರ ಬಿಡುಗಡೆ ಮಾಡಿರುವ ವೋಟರ್ ಟ್ರೆಂಡ್ ವರದಿಯ ಪ್ರಕಾರ, 224 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟ ಬರೋಬ್ಬರಿ 149 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಆಡಳಿತಾರೂಢ ಕಾಂಗ್ರೆಸ್ ಕೇವಲ 75 ಸ್ಥಾನಗಳಿಗೆ ಕುಸಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಉತ್ತರ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಗಳು ಬಿಜೆಪಿಯತ್ತ ವಾಲುತ್ತಿದ್ದು, ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ.
ಕಾಂಗ್ರೆಸ್ ಪಕ್ಷವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರ ಎನ್‌ಡಿಎಗಿಂತ ಮುನ್ನಡೆ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಅದರ ಪ್ರಕಾರ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿಜೆಪಿ ಪಾರುಪತ್ಯ ಮುಂದುವರಿಯಲಿವೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬದಲಾವಣೆಯಿಂದ ಅಸಮಾಧಾನಗೊಂಡಿರುವ ಒಂದು ವರ್ಗದ ಮತದಾರರು ಕಾಂಗ್ರೆಸ್‌ಗೆ ಕೈಕೊಡಲಿದ್ದು, ಇದು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ದೊಡ್ಡ ಮಟ್ಟದಲ್ಲಿ ಲಾಭ ತಂದುಕೊಡಲಿದೆ ಎಂದು ವರದಿ ಹೇಳಿದೆ.
ಇದೇ ವೇಳೆ, ಇದು ಜನರ ಬಳಿಗೆ ತೆರಳಿ ನಡೆಸಿದ ಸಮೀಕ್ಷೆ ಅಲ್ಲ. ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಆಡಳಿತ ವಿರೋಧಿ ಅಲೆ, ಹಿಂದಿನ ಚುನಾವಣಾ ಫಲಿತಾಂಶಗಳು ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಆಧರಿಸಿದ ರಾಜಕೀಯ ಪ್ರೊಜೆಕ್ಷನ್ ಮಾತ್ರ ಎಂದು ಬಾರ್ ಡೇಟಾ ಸಂಸ್ಥೆ ಸ್ಪಷ್ಟಪಡಿಸಿದೆ.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
25-10-26 08:25 pm
HK News Desk
ಯುಪಿಐ ಮೇಲಿನ ತೆರಿಗೆ ಪ್ರಸ್ತಾಪಕ್ಕೆ ಅಣ್ಣಾಮಲೈ ವಿರೋ...
24-10-26 10:59 pm
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆ...
24-10-26 08:06 pm
ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನ...
24-10-26 01:59 pm
25-10-26 04:33 pm
HK News Staffer
ಐಷಾರಾಮಿ ಜೀವನಕ್ಕಾಗಿ ಹದಿಹರೆಯದ ಯುವಕರ ದುಷ್ಕೃತ್ಯ ;...
25-10-26 02:49 pm
ಕುಂದಾಪುರ ; ಹಾಸಿಗೆ ಹಿಡಿದಿದ್ದ ಅಂಗವಿಕಲ ಮಗಳನ್ನು ಕ...
25-10-26 01:44 pm
ಸಂಪಾಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಲಾರಿ...
25-10-26 01:31 pm
ಸಿದ್ದರಾಮಯ್ಯ ಸ್ಟಿಂಗ್ ; ಜಾಲತಾಣದಲ್ಲಿ ವಿಡಿಯೋ ಅಪ್ಲ...
24-10-26 10:21 pm