ಬ್ರೇಕಿಂಗ್ ನ್ಯೂಸ್
27-10-26 08:40 pm HK News Staffer ಕರಾವಳಿ
ಮಂಗಳೂರು, ಅ.27: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯನ್ನು ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡ ತನಿಖೆಯನ್ನು ತೀವ್ರಗೊಳಿಸಿದೆ. ಮೊದಲ ಹಂತವಾಗಿ, ಪ್ರಕರಣದ ಆರಂಭದಲ್ಲಿ ತನಿಖೆ ನಡೆಸಿದ್ದ ಸ್ಥಳೀಯ ಪೊಲೀಸರು, ಸಿಐಡಿ ಮತ್ತು ಸಿಬಿಐ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ.
2012ರಲ್ಲಿ ನಡೆದ ಪ್ರಕರಣದ ಆರಂಭಿಕ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ. ವರದಿಯ ಪ್ರಕಾರ, ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ನೋಟಿಸ್ ಪಡೆದವರಲ್ಲಿ ಪ್ರಮುಖ ಅಧಿಕಾರಿಗಳು
ನೋಟಿಸ್ ಪಡೆದವರ ಪಟ್ಟಿಯಲ್ಲಿ ಅಂದಿನ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಭಾಸ್ಕರ್ ರೈ, ಪಿಎಸ್‌ಐ ಯೋಗೀಶ್ ಹಾಗೂ ಸಿಐಡಿ ತನಿಖಾಧಿಕಾರಿ ಡಿವೈಎಸ್‌ಪಿ ರುದ್ರಮುನಿ ಅವರ ಹೆಸರುಗಳಿವೆ. ಅಂದಿನ ಬೆಳ್ತಂಗಡಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದ ಎಎಸ್‌ಐ ಕಲೈಮಾರ್, ಮಹಿಳಾ ಹೆಡ್ ಕಾನ್ಸ್‌ಟೇಬಲ್ ಸವಿತಾ ಶೆಟ್ಟಿ ಹಾಗೂ ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ಕೃಷ್ಣ, ರಿಷಬ್, ನವೀನ್ ಮತ್ತು ಭಾಸ್ಕರ್ ಅವರಿಗೂ ನೋಟಿಸ್ ನೀಡಲಾಗಿದೆ.
ಪ್ರಕರಣದ ಆರಂಭಿಕ ಮಹಜರು, ಸಾಕ್ಷ್ಯಾಧಾರಗಳ ಸಂಗ್ರಹ ಮತ್ತು ತನಿಖೆಯ ವಿವಿಧ ಹಂತಗಳನ್ನು ಮರು ಪರಿಶೀಲಿಸುವ ಉದ್ದೇಶದಿಂದ ಎಸ್‌ಐಟಿ ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ. ಸಿಐಡಿ ಮತ್ತು ಸಿಬಿಐ ತನಿಖೆಯಲ್ಲಿ ಭಾಗಿಯಾಗಿದ್ದ ಇತರ ಅಧಿಕಾರಿಗಳಿಗೂ ಮುಂದಿನ ದಿನಗಳಲ್ಲಿ ನೋಟಿಸ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಶುಕ್ರವಾರದ ವೇಳೆಗೆ ಹಿಂದಿನ ತನಿಖಾ ತಂಡದಲ್ಲಿದ್ದವರು ಮಂಗಳೂರಿನ ಎಸ್ಐಟಿ ಕಚೇರಿಗೆ ಹಾಜರಾಗುವ ಸಾಧ್ಯತೆಯಿದೆ. ಹಿಂದಿನ ತನಿಖೆಯಲ್ಲಿ ಆಗಿರುವ ಲೋಪಗಳು, ಉದ್ದೇಶಪೂರ್ವಕ ಎಸಗಿರುವ ತಪ್ಪುಗಳ ಬಗ್ಗೆ ಎಸ್ಐಟಿ ಮಾಹಿತಿ ಸಂಗ್ರಹಿಸಲಿದೆ ಅಥವಾ ಪರಿಶೀಲನೆ ಕೈಗೊಳ್ಳುವ ಸಾಧ್ಯತೆಯಿದೆ.
27-10-26 09:47 pm
HK News Desk
ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು...
27-10-26 01:23 pm
ದೇವೇಗೌಡ್ರ ಕುಟುಂಬವನ್ನು ಮುಗಿಸಲು ಡಿಕೆಶಿಯಿಂದ 600...
26-10-26 11:55 am
Rahul Gandhi, Siddaramaiah: ಸ್ಟಿಂಗ್ ಆಪರೇಶನ್ ;...
26-10-26 11:53 am
ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವಗೆ...
24-10-26 05:35 pm
25-10-26 09:40 pm
HK News Staffer
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
27-10-26 09:30 pm
HK News Desk
Soujanya Case: ಸೌಜನ್ಯಾ ಪ್ರಕರಣದ ಮರುತನಿಖೆ ; ರುದ...
27-10-26 08:40 pm
ಮೈಸೂರನ್ನು ಬ್ರಾಂಡ್ ಮಾಡಿದವರು ರಾಜವಂಶಸ್ಥರು, ರಾಜ್ಯ...
27-10-26 03:35 pm
Mangalore Man Missing, Israel: ಉದ್ಯೋಗಕ್ಕಾಗಿ ಇ...
27-10-26 01:53 pm
ಸೌಜನ್ಯ ಪ್ರಕರಣದ ಎಸ್ಐಟಿ ಮುಖ್ಯಸ್ಥರ ಬದಲಾವಣೆಗೆ ಪಟ್...
26-10-26 03:41 pm
27-10-26 09:32 pm
HK News Staffer
ತದಡಿ ಬಂದರಿನಲ್ಲಿ ದುರಂತ ; ಬೋಟ್ ಸ್ವಚ್ಛಗೊಳಿಸುತ್ತ...
27-10-26 08:41 pm
ಮನೆ ಬ್ರೋಕರ್ ವ್ಯಕ್ತಿಯನ್ನು ಅಪಹರಿಸಿ ಬಜಾಲ್ ಬಳಿ ಕೂ...
27-10-26 07:33 pm
ದೇರಳಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿನ ಜೂನಿಯರ್ ವಿದ್...
27-10-26 05:22 pm
ಸುರತ್ಕಲ್ ಬೀಚ್ ಬಳಿ ಕುಡಿದ ಮತ್ತಿನಲ್ಲಿ ಜಗಳ ; ಕೇಸು...
27-10-26 03:01 pm