ಬ್ರೇಕಿಂಗ್ ನ್ಯೂಸ್
11-01-21 10:30 pm Mangaluru Correspondent ಕರಾವಳಿ
ಉಳ್ಳಾಲ, ಜ.11: ವಾರದ ಹಿಂದೆ ತೊಕ್ಕೊಟ್ಟಿನಲ್ಲಿ ಟೈಲರ್ ವೃತ್ತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ತಲೆಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ರಿಕ್ಷಾ ಚಾಲಕನೊಬ್ಬ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ. ಮಹಿಳೆಯ ಸ್ಥಿತಿ ಶಂಕೆಗೆ ಕಾರಣವಾಗಿದ್ದರಿಂದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾಧಿಕ್ (25) ನನ್ನು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.

ತೊಕ್ಕೊಟ್ಟು ಕೇಂದ್ರ ಬಸ್ಸು ತಂಗುದಾಣದ ಬಳಿಯ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಬ್ಲಮೊಗರಿನ ತಾರಿಗುಡ್ಡೆ ನಿವಾಸಿ ದಿನೇಶ್ ಎಂಬವರ ಪತ್ನಿ ಶೋಭಾ (30) ಕಳೆದ ಜ.5 ರಂದು ತೊಕ್ಕೊಟ್ಟಿನಿಂದ ಬಸ್ಸಿನಲ್ಲಿ ಹೊರಟವರು ಮನೆಗೆ ಬಂದಿರಲಿಲ್ಲ. ಮನೆ ಮಂದಿಗೆ ಶೋಭಾ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆಸ್ಪತ್ರೆಯಿಂದಲೇ ಮಾಹಿತಿ ಬಂದಿತ್ತು. ಶೋಭಾ ಬಳಿಯಿದ್ದ ಐಡಿ ಕಾರ್ಡಿನ ವಿಳಾಸದ ಮೂಲಕ ಮನೆಮಂದಿಗೆ ಮಾಹಿತಿ ನೀಡಲಾಗಿತ್ತು. ಮನೆಮಂದಿ ಆಸ್ಪತ್ರೆಗೆ ಬರುವಷ್ಟರಲ್ಲಿ ಶೋಭಾ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು. ಈ ಕುರಿತು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ರಿಕ್ಷಾ ಚಾಲಕ ಗಾಯಾಳು ಮಹಿಳೆಯನ್ನು ತಂದು ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ಮುಟ್ಟಿಸಿ ತೆರಳಿದ್ದಾನೆಂದು ತಿಳಿದುಬಂದಿತ್ತು.
ಆಸ್ಪತ್ರೆ ಸಿಬಂದಿ ಗಾಯಾಳು ಮಹಿಳೆಯನ್ನು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಿದ್ದರು. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿ ಅಪಘಾತ ನಡೆಸಿದೆ ಎನ್ನಲಾದ ವಾಹನಕ್ಕಾಗಿ ಶೋಧ ಮುಂದುವರಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ಆಧಾರದಲ್ಲಿ ಇದೀಗ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
In the case where a 30-year-old woman identified as Shobha was mysteriously injured at Deralakatte, the police on Monday, January 11 arrested the auto-rickshaw driver.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm