ಬ್ರೇಕಿಂಗ್ ನ್ಯೂಸ್
16-11-26 04:28 pm HK News Staffer ಕರಾವಳಿ
ಉಡುಪಿ, ನ.16: ಹಿರಿಯೂರು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದಲ್ಲಿ ಯಾವುದೇ ಗೊಂದಲ ಇಲ್ಲ. ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ತಾಯಿ ಮೂಕಾಂಬಿಕೆ ದರ್ಶನ ಪಡೆದ ನಂತರ ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನಿಂದಲೂ ಹಿರಿಯೂರು ವಿಧಾನಸಭಾ ಕ್ಷೇತ್ರ ಎಂದರೆ ಕಾಂಗ್ರೆಸ್ - ಜೆಡಿಎಸ್ ನಡುವಿನ ಹೋರಾಟದ ಕ್ಷೇತ್ರ. 2013ರಲ್ಲಿ ಜೆಡಿಎಸ್ ಅಭ್ಯರ್ಥಿ 1000 ಮತಗಳ ಅಂತರದಲ್ಲಿ ಸೋತಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿ ಅನುಕಂಪದ ಆಧಾರದಲ್ಲಿ ಜಯ ಗಳಿಸಿದ್ದರು. ಕ್ಷೇತ್ರದಲ್ಲಿ ನನಗೆ ವೈಯಕ್ತಿಕವಾಗಿ ಯಾವುದೇ ಪ್ರತಿಷ್ಠೆ ಇಲ್ಲ. ನನ್ನಲ್ಲಿ ಯಾವುದೇ ಗೊಂದಲವೂ ಇಲ್ಲ. ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಯ ಗಳಿಸುವ ಸಾಧ್ಯತೆ ಬಗ್ಗೆ ಬಿಜೆಪಿಯವರಲ್ಲು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಹೋರಾಡುವ ವಿಚಾರದಲ್ಲಿ ನಮ್ಮ ಮೈತ್ರಿಕೂಟದಲ್ಲಿ ಯಾವುದೇ ಭಿನ್ನ ನಿಲುವು ಇಲ್ಲ. ಅದೇ ರೀತಿ ಹಿರಿಯೂರು ಕ್ಷೇತ್ರದಲ್ಲಿಯೂ ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ನಾವು ಒಗ್ಗಟ್ಟಾಗಿಯೇ ಎದುರಿಸುತ್ತೇವೆ ಎಂದರು. ರಾಜ್ಯದ ಹಿತದೃಷ್ಟಿಯಿಂದ ನಾವು ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮತ್ತು ಹಗರಣಗಳನ್ನು ಜನರೆದುರು ಬಯಲು ಮಾಡಲು ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳ ನಾಯಕರು ತೀವ್ರ ಸ್ವರೂಪದ ಹೋರಾಟಗಳನ್ನು ರೂಪಿಸುತ್ತೇವೆ" ಎಂದವರು ತಿಳಿಸಿದರು.
ಗ್ಯಾರಂಟಿಗಳಿಂದ ಆರ್ಥಿಕ ದಿವಾಳಿತನ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕಳೆದ ಮೂರೂವರೆ ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. 'ಐದು ಗ್ಯಾರಂಟಿ'ಗಳನ್ನು ನೀಡುತ್ತಿರುವುದಾಗಿ ಹೇಳಿಕೊಳ್ಳುವ ಸರ್ಕಾರಕ್ಕೆ ಹಣ ಎಲ್ಲಿಂದ ಬರುತ್ತಿದೆ?ಮುಖ್ಯಮಂತ್ರಿ ಅಥವಾ ಮಂತ್ರಿಗಳು ತಮ್ಮ ಜೇಬಿನಿಂದ ಕೊಡುತ್ತಿದ್ದಾರೆಯೇ? ಎಂದು ಕೇಂದ್ರ ಸಚಿವರು ಖಾರವಾಗಿ ಪ್ರಶ್ನಿಸಿದರು.
ಮುದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಹಾಗೂ ಅಬಕಾರಿ ಸುಂಕವನ್ನು ಮನಬಂದಂತೆ ಹೆಚ್ಚಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಿ ₹32,000 ಕೋಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರೂ, ಬೊಕ್ಕಸದಲ್ಲಿ ಹಣವಿಲ್ಲದಿರುವಾಗ ಇದೆಲ್ಲ ಕೇವಲ ಕಣ್ಣೊರೆಸುವ ತಂತ್ರವಲ್ಲದೆ ಇನ್ನೇನು? ಅಷ್ಟು ಹಣವನ್ನು ಎಲ್ಲಿಂದ ತರುತ್ತಾರೆ? ಅವರು ಪ್ರಶ್ನಿಸಿದರು.
ಬರಗಾಲದ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವಂದ್ವ ನಿಲುವು ಹೊಂದಿದೆ. ಕೇಂದ್ರದ ಮುಂದೆ ಎನ್ ಡಿಆರ್ ಎಫ್ ನಿಯಮಗಳ ಅಡಿಯಲ್ಲಿ ಪರಿಹಾರದ ಬೇಡಿಕೆಯನ್ನು ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಕೇಳುತ್ತಿಲ್ಲ. ಪದೇ ಪದೇ ತನ್ನ ಅಭಿಪ್ರಾಯವನ್ನು ಬದಲಿಸುತ್ತಿದೆ. ಮೊದಲು ಕೇವಲ ₹3,000 ಕೋಟಿ ಕೇಳಿದ್ದ ಕಂದಾಯ ಸಚಿವರು, ನಂತರ ಅದನ್ನು ₹7,500 ಕೋಟಿಗೆ, ಬಳಿಕ ₹11,000 ಕೋಟಿಗೆ ಹಾಗೂ ಈಗ ಬರೋಬ್ಬರಿ ₹22,000 ಕೋಟಿಗೆ ಏರಿಸಿದ್ದಾರೆ. ಪ್ರಧಾನ ಮಂತ್ರಿಗಳ ಮುಂದೆಯೇ ₹62,000 ಕೋಟಿ ಕೃಷಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿ, ಯಾವುದೇ ಸ್ಪಷ್ಟ ಲೆಕ್ಕಾಚಾರವಿಲ್ಲದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.
ರೈತರು ಎಕರೆಗೆ ₹15,000-20,000. ಖರ್ಚು ಮಾಡಿದ್ದರೆ, ರಾಜ್ಯ ಸರ್ಕಾರ ಕೇವಲ ₹2,000 ಅಲ್ಪ ಪರಿಹಾರ ನೀಡಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು. ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ₹40,000 ಕೋಟಿ ಸೆಸ್ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ. ಇಷ್ಟು ಬೃಹತ್ ಮೊತ್ತದ ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿದೆಯಾ ಅಥವಾ ಲೂಟಿ ಮಾಡುತ್ತಿದೆಯಾ? ಎಂದು ಪ್ರಶ್ನಿಸಿದ ಸಚಿವರು, ಸರ್ಕಾರಿ ಶಾಲೆಗಳ ನಿರ್ವಹಣೆಗೂ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಸಾಲ ಹಾಗೂ ಸಿಎಸ್ಆರ್ ನಿಧಿಯನ್ನು ನೆಚ್ಚಿಕೊಳ್ಳುವ ದುಸ್ಥಿತಿ ಬಂದಿದೆ ಎಂದರು.



ಇತ್ತೀಚೆಗೆ ಹಾಸನಾಂಬ ದೇವಸ್ಥಾನದಲ್ಲಿ ದಾಖಲೆಯ ₹29 ಕೋಟಿ ಆದಾಯ ಸಂಗ್ರಹವಾಗಿದ್ದು, ಸರ್ಕಾರದ ಕಣ್ಣು ಈಗ ಧಾರ್ಮಿಕ ಕೇಂದ್ರಗಳ ಮೇಲೂ ಬಿದ್ದಿದೆ. ದೇವಸ್ಥಾನಗಳ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದ ಕುಮಾರಸ್ವಾಮಿ, ಸ್ಟಿಂಗ್ ಪ್ರಕರಣ ಕುರಿತ ಪ್ರಶ್ನೆಗೆ, ನನ್ನ ದೆಹಲಿ ನಿವಾಸದಲ್ಲಿಯೇ ಪ್ರಕರಣದ ಆರೋಪಿಗೆ ಮೊಬೈಲ್ ಹಸ್ತಾಂತರವಾಗಿದೆ ಎಂಬ ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿಕೆಯನ್ನು ಕಟುವಾಗಿ ಟೀಕಿಸಿದರು. "ಕಮಿಷನರ್ ಒಬ್ಬ ಹೆಡ್ ಕ್ಲರ್ಕ್ ಗಿಂತ ಕಡೆಯಾಗಿ ಹೇಳಿಕೆ ನೀಡಿದ್ದಾರೆ, ತಮ್ಮ ಜಾಗ ಉಳಿಸಿಕೊಳ್ಳಲು ಅವರು ಯಾರ ಹಂಗಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ" ಎಂದು ಹರಿಹಾಯ್ದರು. ಅಲ್ಲದೆ, ಈ ಸರ್ಕಾರ ಮತ್ತು ಅಧಿಕಾರಿಗಳಿಂದ ಕುಮಾರಸ್ವಾಮಿಯನ್ನು ಅಷ್ಟು ಸುಲಭವಾಗಿ ಎದುರಿಸಲು ಅಥವಾ ಟಚ್ ಮಾಡಲು ಸಾಧ್ಯವಿಲ್ಲ ಎಂದರಲ್ಲದೆ, ಸ್ಟಿಂಗ್ ಆಪರೇಷನ್ ಯಾರಿಗೆ ತಿರುಗುಬಾಣವಾಗಲಿದೆ ಎಂಬುದನ್ನು ಶೀಘ್ರದಲ್ಲೇ ಬಯಲು ಮಾಡುವುದಾಗಿ ಹೇಳಿದರು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್.ಭೋಜೇಗೌಡ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಟುಂಬ ಸಮೇತ ಮೂಕಾಂಬಿಕೆ ದರ್ಶನ
ಇದಕ್ಕೂ ಮೊದಲು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ತಾಯಿ ಮೂಕಾಂಬಿಕೆಯ ದರ್ಶನ ಪಡೆದುಕೊಂಡರು.
14-11-26 09:24 pm
HK News Desk
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲಿಗೆ...
13-11-26 04:23 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ವಿಡಿಯೋದಲ್ಲಿ ಕಾಣಿ...
09-11-26 07:45 pm
ಒಂದು ಕೋಟಿಗೆ 1.30 ಕೋಟಿ ಆಫರ್ ! ಹಣ ದುಪ್ಪಟ್ಟು ಪ್ಲ...
08-11-26 10:24 pm
16-11-26 10:56 pm
Mangaluru Staffer
ಝಾಕಿರ್ ನಾಯ್ಕ್ 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇ...
14-11-26 10:00 am
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
16-11-26 09:58 pm
HK News Staffer
ಮಂಗಳೂರು ವಿವಿಯಲ್ಲಿ ನ.17ರಿಂದ ಮಕ್ಕಳ ಚಲನಚಿತ್ರೋತ್ಸ...
16-11-26 06:21 pm
ಸಂತ ಅಲೋಶಿಯಸ್ ವಿಶ್ವವಿದ್ಯಾಲಯದಲ್ಲಿ ಹಿಂದಿ ಮೇಜರ್,...
16-11-26 06:19 pm
ತುಳು ಭವನದಲ್ಲಿ ನ.17ರಂದು ಹಲವು ಸಾಧಕರಿಗೆ ಗೌರವ ; ದ...
16-11-26 04:38 pm
ಹಿರಿಯೂರಿನಲ್ಲಿ ಒಮ್ಮತದ ಅಭ್ಯರ್ಥಿ, ಗ್ಯಾರಂಟಿಯಿಂದ ಆ...
16-11-26 04:28 pm
16-11-26 09:56 pm
HK News Staffer
ಮೊಟ್ಟೆ ಸಾಗಾಟ ನೆಪದಲ್ಲಿ ಕೇರಳಕ್ಕೆ ಜಾನುವಾರು ಸಾಗಣೆ...
16-11-26 04:31 pm
ಬೇಲೂರಿನಲ್ಲಿ ಎರಡು ದಿನಗಳ ಅಂತರದಲ್ಲಿ ಮತ್ತೊಬ್ಬ ಕಾಡ...
16-11-26 02:50 pm
ಕೈಗಳನ್ನು ಚೂಡಿದಾರದ ಶಾಲಿನಿಂದ ಕಟ್ಟಿಕೊಂಡು ಮಾಬುಕಳ...
15-11-26 09:12 pm
ಬೆಂಗಳೂರಿಗೆ ಹೊರಟಿದ್ದ ಬೈಂದೂರಿನ ಸಾಫ್ಟ್ವೇರ್ ಯುವಕ...
15-11-26 09:10 pm