ಬ್ರೇಕಿಂಗ್ ನ್ಯೂಸ್
22-11-26 04:17 pm HK News Staffer ಕರಾವಳಿ
ಬಂಟ್ವಾಳ, ನ.22: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಾರು ಹಾಗೂ ದುರಸ್ತಿಗಾಗಿ ನಿಲ್ಲಿಸಿದ್ದ ಕ್ರೇನ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೆಕಾನಿಕ್‌ಗಳು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಳ್ಳಿಮಾರ್‌ನಲ್ಲಿ ಶನಿವಾರ ಸಂಭವಿಸಿದೆ.
ಪುಂಜಾಲಕಟ್ಟೆ ನಿವಾಸಿ ಯು.ಮಹಮ್ಮದ್ ಎಂಬವರು ಮಗಳನ್ನು ಕಾರಿನಲ್ಲಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಕಳ್ಳಿಮಾರ್‌ನ ಸುವರ್ಣ ಇಂಜಿನಿಯರಿಂಗ್ ಶಾಪ್ ಮುಂಭಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ರಸ್ತೆ ಬದಿ ಕಾರನ್ನು ನಿಲ್ಲಿಸಿ ವ್ಯಕ್ತಿಯೊಬ್ಬರು ಬೇರೆ ಕಡೆಗೆ ತೆರಳಿದ್ದರು. ಸಮೀಪದಲ್ಲೇ ಕ್ರೇನ್‌ವೊಂದನ್ನು ದುರಸ್ತಿಗಾಗಿ ನಿಲ್ಲಿಸಲಾಗಿತ್ತು. ಅಯ್ಯಪ್ಪ ಮಾಲಾಧಾರಿ, ಮೆಕ್ಯಾನಿಕ್ ಮಾಧವ ಎಂಬವರು ಕ್ರೇನ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರೆ, ಪುನೀತ್ ಎಂಬವರು ಬೈಕ್‌ನಲ್ಲಿ ಕುಳಿತು ಅವರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಅತಿ ವೇಗದಲ್ಲಿ ಬಂದ ಕಾರು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಕ್ರೇನ್‌ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಬದಿಯಿದ್ದ ಕಾರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟು ನಿಂತಿದೆ. ಡಿಕ್ಕಿಯ ತೀವ್ರತೆಗೆ ಕ್ರೇನ್ ದುರಸ್ತಿ ಮಾಡುತ್ತಿದ್ದ ಮಾಧವ ಹಾಗೂ ಬೈಕ್‌ನಲ್ಲಿದ್ದ ಪುನೀತ್ ಸಜೀಪ ವಾಹನಗಳ ನಡುವೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹರಸಾಹಸ ಪಟ್ಟು ಇಬ್ಬರನ್ನೂ ಹೊರತೆಗೆದಿದ್ದಾರೆ. ಕಾರು ಚಾಲಕ ಯು.ಮಹಮ್ಮದ್ ಅವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರಲ್ಲದೆ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಿದರು.
20-11-26 05:15 pm
HK News Staffer
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
ಹಿರಿಯೂರು ಅಭ್ಯರ್ಥಿ ; ನಾವು ಕುಮಾರಸ್ವಾಮಿ ಜೊತೆ ಮಾತ...
19-11-26 12:32 pm
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ...
18-11-26 11:03 pm
ರಾಜ್ಯದಲ್ಲಿ 30ಕ್ಕೂ ಹೆಚ್ಚು ಐಪಿಎಸ್ ವರ್ಗಾವಣೆ ; ಬೆ...
18-11-26 07:26 pm
21-11-26 11:44 am
HK News Staffer
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
"ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್...
19-11-26 01:19 pm
ಸೌದಿಗೆ ನವೆಂಬರ್ 30ರ ವರೆಗೆ ವಿಮಾನ ಸೇವೆ ರದ್ದು ; ಇ...
18-11-26 11:28 pm
22-11-26 04:17 pm
HK News Staffer
ಮಂಗಳೂರು ಏರ್ಪೋರ್ಟ್ ನಲ್ಲಿ ಪಾರ್ಕಿಂಗ್ ಶುಲ್ಕ ದುಬಾರ...
21-11-26 10:59 pm
‘ಮಹಾತ್ಮೆ ಕುದ್ಮುಲ್’ ; ಸೂರಿಲ್ಲದ, ತುಂಡು ಭೂಮಿ ಇಲ್...
21-11-26 10:29 pm
ಅಪಹರಣ ಆಗಿಲ್ಲ, ವಿದ್ಯಾರ್ಥಿನಿ ತಪ್ಪುದಾರಿ ತುಳಿದಿದ್...
20-11-26 09:53 pm
ಮುಸ್ಲಿಂ ಯುವತಿ ಅಪಹರಣ ; ಕೇರಳದಲ್ಲಿ ಸಂಬಂಧಿಕರ ಮನೆಯ...
20-11-26 09:51 pm
21-11-26 04:41 pm
HK News Staffer
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm
ಬಂಟ್ವಾಳ ; ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ...
19-11-26 09:20 pm
Baglur Manchapanahalli Murder: ಗುಜರಿ ವ್ಯಾಪಾರದ...
19-11-26 03:20 pm