ಬ್ರೇಕಿಂಗ್ ನ್ಯೂಸ್
26-11-26 09:00 pm HK News Staffer ಕರಾವಳಿ
ಪುತ್ತೂರು, ನ.26: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೊಂದು ಟೋಲ್ ಶುರುವಾಗಿದೆ. ಬಿ.ಸಿ.ರೋಡ್- ಅಡ್ಡಹೊಳೆ ವರೆಗಿನ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ಟೋಲ್ ಪ್ಲಾಝಾ ಹಾಕಲಾಗಿದ್ದು ನ.26ರಿಂದ ಅಧಿಕೃತ ಕಾರ್ಯಾಚರಣೆ ಆರಂಭಿಸಿದೆ.
ಬಿ.ಸಿ.ರೋಡ್‌ನಿಂದ ಅಡ್ಡಹೊಳೆ ತನಕದ ಚತುಷ್ಪಥ ರಸ್ತೆ ಕಾಮಗಾರಿ ಶೇಕಡಾ 95ರಷ್ಟು ಪೂರ್ಣಗೊಂಡಿದ್ದು ಇದರ ಬೆನ್ನಲ್ಲೇ ವಾಹನ ಪ್ರಯಾಣಿಕರಿಗೆ ಟೋಲ್ ಬರೆ ಹಾಕಲಾಗಿದೆ. ಬಿ.ಸಿ.ರೋಡು- ಪೆರಿಯಶಾಂತಿ ಮಧ್ಯೆ 46 ಕಿ.ಮೀ. ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆ ಸಂಸ್ಥೆ ಕೆಎನ್‌ಆರ್ ಕನ್‌ಸ್ಟ್ರಕ್ಷನ್ ಹೆದ್ದಾರಿ ನಿರ್ಮಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಬಿಟ್ಟುಕೊಟ್ಟಿದೆ.
ಚತುಷ್ಪಥ ಹೆದ್ದಾರಿಯಲ್ಲಿ ಎರಡೂ ಕಡೆ ತಲಾ ನಾಲ್ಕು ಲೇನ್‌ಗಳಿದ್ದು ಏಕಕಾಲದಲ್ಲಿ ಎರಡು ಬದಿಯಿಂದ ಎಂಟು ಲೇನ್‌ಗಳಲ್ಲಿ ವಾಹನ ಸಾಗುವಂತೆ ಹೆದ್ದಾರಿ ನಿರ್ಮಿಸಲಾಗಿದೆ. ಇದರ ಜೊತೆಗೆ ಎಂಟು ಲೇನ್ ಗೆ ತಕ್ಕಂತೆ ಟೋಲ್ ಪ್ಲಾಜಾ ಹಾಕಲಾಗಿದ್ದು ಶುಲ್ಕ ವಸೂಲಿಗೆ ಮಂಗಳೂರಿನ ಕೋರಲ್ ಸಂಸ್ಥೆ ಗುತ್ತಿಗೆಯನ್ನು ಪಡೆದಿದೆ.
ಮಂಗಳೂರು - ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈವರೆಗೆ ನೆಲಮಂಗಲದಿಂದ ಸಕಲೇಶಪುರ ಮಧ್ಯೆ ಐದು ಕಡೆ ಟೋಲ್ ಫ್ಲಾಝಾಗಳಿದ್ದವು. ಇದೀಗ ಉಪ್ಪಿನಂಗಡಿ ಬಳಿ ಮತ್ತೊಂದು ದೊಡ್ಡ ಟೋಲ್ ಪ್ಲಾಜಾ ನಿರ್ಮಾಣವಾಗಿದ್ದು ಹೆದ್ದಾರಿ ಬಳಸುವ ಪ್ರಯಾಣಿಕರಿಗೆ ಮಗದೊಂದು ಹೊರೆ ಬಿದ್ದಿದೆ. ಇದೇ ವೇಳೆ, ತುಂಬೆ ಬಳಿಯ ಬ್ರಹ್ಮರಕೂಟ್ಲು ಎಂಬಲ್ಲಿ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಿದ್ದ ಟೋಲ್ 15 ವರ್ಷಗಳ ಬಳಿಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ಇದೇ ವೇಳೆ, ಉಪ್ಪಿನಂಗಡಿ ಟೋಲ್ ಪ್ಲಾಜಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಳಗಿನ ನೋಂದಣಿಯ ವಾಹನಗಳಿಗೆ ಶೇಕಡಾ 50ರಷ್ಟು ವಿನಾಯಿತಿ ನೀಡಲಾಗಿದೆ. ಶುಂಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳಿಗೆ 360 ರೂಪಾಯಿ ಮಾಸಿಕ ಪಾಸ್ ವ್ಯವಸ್ಥೆ ಇರುತ್ತದೆ ಎಂದು ಟೋಲ್ ಪ್ಲಾಜಾ ಅಧಿಕಾರಿಗಳು ತಿಳಿಸಿದ್ದಾರೆ.
26-11-26 08:34 pm
HK News Staffer
ಆನೆ ಸ್ಥಳಾಂತರಕ್ಕೆ ಚಿಕ್ಕಮಗಳೂರು ಶಾಸಕರ ವಿರೋಧ ; ಯಾ...
25-11-26 07:48 pm
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ;...
25-11-26 02:11 pm
ಯೋಗಿಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ...
25-11-26 02:10 pm
ಹಾಸನ ಜಿಲ್ಲಾಧಿಕಾರಿ ಬಗ್ಗೆ ಲಂಚದ ಆರೋಪ ; ಕೇಂದ್ರ ಸಚ...
24-11-26 08:43 pm
25-11-26 11:53 am
HK News Staffer
Alwyn Joel Noronha, Mangalore: ಉದ್ಯಮಿ ಆಲ್ವಿನ್...
24-11-26 09:44 pm
ಮುಂಬೈ ನೌಕಾನೆಲೆಯಿಂದ ಮಾಹಿತಿ ಸೋರಿಕೆ ; 90 ರಹಸ್ಯ ವ...
24-11-26 08:45 pm
ಮಾಜಿ ಸಿಎಂ ಸ್ಟಾಲಿನ್ ಸೋಲಿಸಿದ್ದ ನಾಯಕನಿಗೆ ಭಾವಪೂರ್...
21-11-26 11:44 am
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
26-11-26 09:00 pm
HK News Staffer
ಎಸ್ಐಟಿ ಕಚೇರಿಗೆ ಮಹೇಶ್ ಶೆಟ್ಟಿ ತಿಮರೋಡಿ ದಾಖಲೆ ಸಲ್...
26-11-26 03:53 pm
ಬ್ರಹ್ಮರಕೂಟ್ಲು ಟೋಲ್ ಕೇಂದ್ರಕ್ಕೆ ಎಸ್ಡಿಪಿಐ ಮುತ್ತಿ...
26-11-26 03:03 pm
ಹಾಸನ ಪೊಲೀಸರು ಮಾಧ್ಯಮದವ್ರಿಗೆ ನೋಟಿಸ್ ನೀಡಿದ್ದರಲ್ಲ...
25-11-26 06:58 pm
ಸೌಜನ್ಯಾ ಪ್ರಕರಣ ಅತ್ಯಂತ ಸೂಕ್ಷ್ಮ ; ವೈಜ್ಞಾನಿಕ ಆಧಾ...
25-11-26 06:29 pm
26-11-26 08:35 pm
HK News Staffer
ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯ...
26-11-26 07:47 pm
ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆ...
26-11-26 02:48 pm
ದುಬೈನಿಂದ ಚಿನ್ನ ಸ್ಮಗ್ಲಿಂಗ್ ; ಶೌಚಾಲಯದಲ್ಲಿ ಬಚ್ಚಿ...
26-11-26 01:01 pm
ಒಂದು ಟೀ ಶರ್ಟ್ ಕೊಂಡರೆ ಐ-ಫೋನ್ ಗಿಫ್ಟ್ ! ಶ್ರೀನಿವಾ...
25-11-26 01:30 pm