ಬ್ರೇಕಿಂಗ್ ನ್ಯೂಸ್
27-11-26 06:23 pm HK News Staffer ಕರಾವಳಿ
ಮಂಗಳೂರು, ನ.27: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಿರುವ ಅಸಹಜ ಸಾವುಗಳ ಬಗ್ಗೆ ವಿಶೇಷ ತನಿಖಾ ತಂಡ ನೀಡಿರುವ ವರದಿಗಳನ್ನು ಆಧರಿಸಿ, ನಿಷ್ಪಕ್ಷಪಾತ ತನಿಖೆಗೆ ಕೋರಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದರೂ, ಅದನ್ನು ನಿರ್ಲಕ್ಷ್ಯ ಮಾಡಲಾಗಿದೆ. ಎಸ್ಐಟಿ ವರದಿ ಆಧರಿಸಿ ಸಮಗ್ರ ತನಿಖೆಗಾಗಿ ಎಸ್ಐಟಿಗೆ ಅಧಿಕಾರ ನೀಡಬೇಕು ಎಂದು ಆಗ್ರಹಿಸಿ ಮಂಗಳೂರಿನಲ್ಲಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.
ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಅವರು ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ್ದು, ನ.30ರಿಂದ ಮೂರು ದಿನಗಳ ಕಾಲ ಮಂಗಳೂರಿನ ಮಿನಿ ವಿಧಾನ ಸೌಧ ಎದುರಿನ ಕ್ಲಾಕ್ ಟವರ್ ಬಳಿಯಲ್ಲಿ ಧರಣಿ ನಡೆಸಲಾಗುವುದು. ರಾಜ್ಯ ಸರ್ಕಾರ ನಮ್ಮ ಮನವಿಗೆ ಓಗೊಡದಿದ್ದರೆ ಆಬಳಿಕ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಎಸ್ಐಟಿ ನೀಡಿರುವ ವರದಿಯಲ್ಲಿ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ 1998ರಿಂದ 2015ರ ನಡುವೆ 1510 ಅಸಹಜ ಸಾವುಗಳಾಗಿರುವ ಬಗ್ಗೆ ತಿಳಿಸಿದೆ. ಅಲ್ಲದೆ, ಇದರಲ್ಲಿ 1480 ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎನ್ನುವ ಬಗ್ಗೆಯೂ ಹೇಳಿದೆ. ಇದರ ಹೊರತಾಗಿ ಎಸ್ಐಟಿ ಅಧಿಕಾರಿಗಳಿಗೆ 73 ದೂರು ಅರ್ಜಿಗಳು ಸಲ್ಲಿಕೆಯಾಗಿವೆ. ವಿವಿಧ ಸಂಶಯಾಸ್ಪದ ಕೊಲೆ ಪ್ರಕರಣಗಳ ಬಗ್ಗೆ ನಾವು ದೂರು, ದಾಖಲೆಗಳನ್ನು ಎಸ್ಐಟಿಗೆ ನೀಡಿದ್ದೇವೆ. ಇದರ ಬಗ್ಗೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು 2026ರ ಮಾರ್ಚ್ 24ರಂದು ರಾಜ್ಯ ಸರ್ಕಾರಕ್ಕೆ ಡಿಜಿ ಮತ್ತು ಐಜಿಪಿ ಮೂಲಕ ಪತ್ರ ಬರೆದಿದ್ದು, ಸಮಗ್ರ ತನಿಖೆಗೆ ಅನುಮತಿ ಕೇಳಿದ್ದಾರೆ.
ಆದರೆ ರಾಜ್ಯ ಸರ್ಕಾರ ತನಿಖೆಗೆ ಅನುಮತಿ ನೀಡಿಲ್ಲ. ಈ ಬಗ್ಗೆ ರಾಜ್ಯ ಮಹಿಳಾ ಆಯೋಗ ನಾಲ್ಕು ಬಾರಿ ಪತ್ರ ಬರೆದಿದ್ದು ತನಿಖೆಗೆ ಒತ್ತಾಯಿಸಿದೆ. ಎಂಟು ತಿಂಗಳಿನಿಂದ ಎಸ್ಐಟಿ ನೀಡಿರುವ ವರದಿಯನ್ನು ಮುಚ್ಚಿಟ್ಟಿದ್ದು ಯಾಕೆ ಎನ್ನುವ ಬಗ್ಗೆ ಬಹಿರಂಗಪಡಿಸಬೇಕು. ನಮ್ಮ ಪ್ರತಿಭಟನೆ ಯಾವುದೇ ವ್ಯಕ್ತಿಯ ಅಥವಾ ಸಂಸ್ಥೆಯ ವಿರುದ್ಧ ಅಲ್ಲ. ಹೆಣ್ಮಕ್ಕಳ ಸಾವಿಗಾಗಿ ನ್ಯಾಯಕ್ಕಾಗಿ ಧ್ವನಿ ಎತ್ತಿದ್ದೇವೆ ಎಂದು ಜಯಂತ್ ಹೇಳಿದರು. 2016ರಲ್ಲಿ ಮಕ್ಕಳ ದೌರ್ಜನ್ಯ ವಿರೋಧಿ ಸಮಿತಿಯ ಉಗ್ರಪ್ಪ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವರ್ಷಕ್ಕೆ 300 ಅಪ್ರಾಪ್ತ ಹೆಣ್ಮಕ್ಕಳ ಮೇಲೆ ದೌರ್ಜನ್ಯಗಳಾಗುತ್ತಿದ್ದು, ಕ್ರಮಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದರ ಬಗ್ಗೆಯೂ ನಾವು ಮಾಹಿತಿ ಸಂಗ್ರಹಿಸಿದ್ದು, ಸರ್ಕಾರ ಮೌನ ವಹಿಸಿದ್ದೇಕೆ ಎಂದು ಸುದ್ದಿಗೋಷ್ಟಿಯಲ್ಲಿದ್ದ ದಿನೇಶ್ ಗಾಣಿಗ ಹೇಳಿದರು.
ಈಗ ಸಾಂಕೇತಿಕವಾಗಿ ಮೂರು ದಿನಗಳ ಧರಣಿ ನಡೆಸಲಿದ್ದು, ಸರ್ಕಾರ ಮಣಿಯದಿದ್ದರೆ ಇಡೀ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ಆರಂಭವಾಗಲಿದೆ. ಎಸ್ಐಟಿಗೆ ಹೆಚ್ಚಿನ ತನಿಖೆಗಾಗಿ ಅಧಿಕಾರ ನೀಡಬೇಕು ಎನ್ನುವುದೇ ನಮ್ಮ ಬೇಡಿಕೆಯಾಗಿದೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ತನುಷ್ ಶೆಟ್ಟಿ, ಚರಣ್ ಉಪಸ್ಥಿತರಿದ್ದರು.
26-11-26 08:34 pm
HK News Staffer
ಆನೆ ಸ್ಥಳಾಂತರಕ್ಕೆ ಚಿಕ್ಕಮಗಳೂರು ಶಾಸಕರ ವಿರೋಧ ; ಯಾ...
25-11-26 07:48 pm
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ;...
25-11-26 02:11 pm
ಯೋಗಿಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ...
25-11-26 02:10 pm
ಹಾಸನ ಜಿಲ್ಲಾಧಿಕಾರಿ ಬಗ್ಗೆ ಲಂಚದ ಆರೋಪ ; ಕೇಂದ್ರ ಸಚ...
24-11-26 08:43 pm
25-11-26 11:53 am
HK News Staffer
Alwyn Joel Noronha, Mangalore: ಉದ್ಯಮಿ ಆಲ್ವಿನ್...
24-11-26 09:44 pm
ಮುಂಬೈ ನೌಕಾನೆಲೆಯಿಂದ ಮಾಹಿತಿ ಸೋರಿಕೆ ; 90 ರಹಸ್ಯ ವ...
24-11-26 08:45 pm
ಮಾಜಿ ಸಿಎಂ ಸ್ಟಾಲಿನ್ ಸೋಲಿಸಿದ್ದ ನಾಯಕನಿಗೆ ಭಾವಪೂರ್...
21-11-26 11:44 am
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
27-11-26 06:23 pm
HK News Staffer
ಬೋಳೂರು - ಬೆಂಗ್ರೆ ಸೇತುವೆ ಕಾಮಗಾರಿ ; ಕ್ರೇನ್ ಸಹಿತ...
27-11-26 12:28 pm
ಮಂಗಳೂರು - ಬೆಂಗಳೂರು ವಾಹನ ಸಂಚಾರಕ್ಕೆ ಮತ್ತೊಂದು ಹೊ...
26-11-26 09:00 pm
ಎಸ್ಐಟಿ ಕಚೇರಿಗೆ ಮಹೇಶ್ ಶೆಟ್ಟಿ ತಿಮರೋಡಿ ದಾಖಲೆ ಸಲ್...
26-11-26 03:53 pm
ಬ್ರಹ್ಮರಕೂಟ್ಲು ಟೋಲ್ ಕೇಂದ್ರಕ್ಕೆ ಎಸ್ಡಿಪಿಐ ಮುತ್ತಿ...
26-11-26 03:03 pm
27-11-26 03:14 pm
HK News Staffer
ಗೂಗಲ್ನಲ್ಲಿ ಹುಡುಕಾಡಿ ತುಂಗಾ ನದಿಗೆ ಸ್ನಾನಕ್ಕಿಳಿದ...
26-11-26 08:35 pm
ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯ...
26-11-26 07:47 pm
ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆ...
26-11-26 02:48 pm
ದುಬೈನಿಂದ ಚಿನ್ನ ಸ್ಮಗ್ಲಿಂಗ್ ; ಶೌಚಾಲಯದಲ್ಲಿ ಬಚ್ಚಿ...
26-11-26 01:01 pm