ಬ್ರೇಕಿಂಗ್ ನ್ಯೂಸ್
15-01-21 10:55 am Mangalore Correspondent ಕರಾವಳಿ
ಮಂಗಳೂರು, ಜ.15: ಶಾರ್ಜಾದಿಂದ ಭಾರತಕ್ಕೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಚಿನ್ನ ತರುತ್ತಿದ್ದ ಮತ್ತಿಬ್ಬರು ಖದೀಮರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ನಿವಾಸಿ ಫೈಸಲ್ ತೊಟ್ಟಿ(37), ಮೊಹಮ್ಮದ್ ಸುಹೈಬ್ (31) ಬಂಧಿತರು. ಇವರು ತಮ್ಮ ಒಳ ಉಡುಪಿನ ಒಳಗೆ ರಹಸ್ಯವಾಗಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ತರುತ್ತಿದ್ದರು. ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯ ಕಂಡುಬಂದು ಆರೋಪಿಗಳನ್ನು ಪ್ಯಾಂಟ್, ಶರ್ಟ್ ಬಿಚ್ಚಿಸಿ ತನಿಖೆಗೆ ಒಳಪಡಿಸಿದಾಗ, ಚಿನ್ನದ ಅಂಶ ಪತ್ತೆಯಾಗಿದೆ. ಇಬ್ಬರ ಬಳಿ 24 ಕ್ಯಾರೆಟ್ ಮೌಲ್ಯದ 2 ಕೇಜಿ 154 ಗ್ರಾಮ್ ಚಿನ್ನ ಸಿಕ್ಕಿದ್ದು , ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ಒಂದು ಕೋಟಿ 9 ಲಕ್ಷ ಆಗುತ್ತದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳು ಜ.14ರಂದು ಸಂಜೆ ಶಾರ್ಜಾದಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರು ಕಸ್ಟಮ್ಸ್ ವಿಭಾಗದ ಉಪಾಯುಕ್ತ ಪ್ರವೀಣ್ ಖಂಡಿ, ಎಸ್ಪಿಗಳಾದ ಶ್ರೀಕಾಂತ್, ರಂಜನ್ ಬೆಹ್ರಾ, ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಸ್ಟಮ್ಸ್ ಆಯುಕ್ತರಾದ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನ್ಸ್ ಜಾರ್ಜ್, ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Gold worth Rs 1.9 Crore seized at Mangalore International Airport by a passenger who arrived from Dubai. He was smuggling the gold by hiding it inside his innewear.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm