ಬ್ರೇಕಿಂಗ್ ನ್ಯೂಸ್
16-01-21 06:00 pm Mangalore Correspondent ಕರಾವಳಿ
ಮಂಗಳೂರು, ಜ.16 : ಖಾಸಗಿ ಬಸ್‌ನಲ್ಲಿ ಯುವತಿಗೆ ಸಹ ಪ್ರಯಾಣಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ಕುರಿತು ಜಾಲತಾಣದಲ್ಲಿ ಯುವತಿ ಪೋಸ್ಟ್ ಹಂಚಿಕೊಂಡಿದ್ದು ಬಳಿಕ ಅವರನ್ನು ಸಂಪರ್ಕಿಸಲಾಯಿತು. ಯುವತಿಯೇ ಉಳ್ಳಾಲ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ಒಂದು ವೇಳೆ ಯುವತಿ ದೂರು ನೀಡದಿದ್ದಲ್ಲಿ ಸ್ವಯಂಪ್ರೇರಿತ ದೂರನ್ನು ಪೊಲೀಸರೇ ದಾಖಲಿಸುತ್ತಿದ್ದರು ಎಂದು ಹೇಳಿದರು.
ಶೀಘ್ರದಲ್ಲೇ ಈ ಬಗ್ಗೆ ಬಸ್ ಮಾಲಕರ ಸಭೆ ಕರೆದು ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಲು ಡಿಸಿಪಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಸ್‌ಗಳಲ್ಲಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಇಂತಹ ಘಟನೆಗಳನ್ನು ತಡೆಗಟ್ಟಬಹುದು. ಅಲ್ಲದೆ, ಮಹಿಳಾ ತಂಡವೊಂದನ್ನು ರಚಿಸಿ, ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಲು ಚಿಂತಿಸಿದ್ದೇವೆ. ಶೀಘ್ರದಲ್ಲಿಯೇ ಈ ಕಾರ್ಯಾಚರಣೆ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.
ಜ.14ರಂದು ಅಪರಾಹ್ನ 3:45ರ ಸುಮಾರಿಗೆ ಯುವತಿಯೊಬ್ಬರು ಖಾಸಗಿ ಬಸ್‌ನಲ್ಲಿ ದೇರಳಕಟ್ಟೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದರು. ಈ ವೇಳೆ ಯುವತಿ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬ ಆಕೆಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ್ದ. ಈ ಬಗ್ಗೆ ಯುವತಿ ಇನ್‌ಸ್ಟಾಗ್ರಾಂನಲ್ಲಿ ಘಟನೆಯ ವಿವರ ಹಂಚಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶೀಘ್ರದಲ್ಲಿ ಪತ್ತೆಹಚ್ಚಿ, ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆ ಯಾವುದೇ ಭಾಗದಲ್ಲಿ ನಡೆದರೂ 112 ನಂಬರ್‌ಗೆ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದರು.
Mangalore city police commissioner announced special team to investigate sexual harassment case in private bus
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm