ಬ್ರೇಕಿಂಗ್ ನ್ಯೂಸ್
17-01-21 04:47 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜ.17 : ಮಂಗಳೂರಿನ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಗಲಭೆಗಳನ್ನು ನಿಯಂತ್ರಿಸುವುದರಲ್ಲಿ ಮಹತ್ವದ ಪಾತ್ರ ವಹಿಸುವ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎ ಎಫ್) ಘಟಕ ಯಾರ ಅರಿವಿಗೂ ಬಾರದಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಸ್ಥಳಾಂತರಗೊಂಡಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಿರುವ ಅನ್ಯಾಯ. ಇದು ಸಂಸದ ನಳಿನ್ ಕುಮಾರ್ ಕಟೀಲರ ವೈಫಲ್ಯಕ್ಕೆ ಮತ್ತೊಂದು ಉದಾಹರಣೆ, ಸಂಸದರು ಈ ವೈಫಲ್ಯದ ಹೊಣೆ ಹೊತ್ತು ಜಿಲ್ಲೆಯ ಜನತೆಯ ಕ್ಷಮೆ ಕೋರಬೇಕು, ಸೂಕ್ತ ವಿವರಣೆ ನೀಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮುನೀರ್ ಕಾಟಿಪಳ್ಳ, ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಗೆ ಅತೀ ಅಗತ್ಯವಾಗಿತ್ತು. ಸದಾ ಮತೀಯ ಉದ್ವಿಗ್ನತೆ ತಲೆದೋರುವ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಮಂಗಳೂರು ಕೇಂದ್ರ ಭಾಗವಾಗಿದೆ. ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಮಂಗಳೂರಿನಲ್ಲಿ ಸ್ಥಾಪನೆಗೊಂಡರೆ ಅದು ವಿಮಾನ ನಿಲ್ದಾಣ ಸಹಿತ ಸಾರಿಗೆ ಸಂಪರ್ಕದ ಸೌಲಭ್ಯದಿಂದಾಗಿ ದೂರದ ಜಿಲ್ಲೆಗಳಿಗೂ ತಲುಪಲು ಅನುಕೂಲಕರ ಆಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತು ಈ ಘಟಕದ ಉಪಸ್ಥಿತಿಯೇ ಹಲವು ಹಿಂಸಾಚಾರಗಳಿಗೆ ಕಡಿವಾಣ ಹಾಕುವ ನೈತಿಕ ಶಕ್ತಿಯನ್ನು ಒದಗಿಸುತ್ತಿತ್ತು.
ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಮಂಗಳೂರು ತಾಲೂಕಿನ ಬಡಗ ಎಕ್ಕಾರು ಗ್ರಾಮದಲ್ಲಿ ಐವತ್ತು ಎಕರೆ ಸ್ಥಳವನ್ನು ಗುರುತಿಸಿ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕಕ್ಕಾಗಿ ಕಾದಿರಿಸಲಾಗಿತ್ತು. ಹೆಚ್ಚುವರಿ ಭೂಮಿ ಅಗತ್ಯ ಬಿದ್ದಲ್ಲಿ ಒದಗಿಸುವ ಸಿದ್ಧತೆಗಳನ್ನು ಮಾಡಲಾಗಿತ್ತು. ಈಗ ಏಕಾಏಕಿ ಯಾವ ಚರ್ಚೆಗಳೂ ಇಲ್ಲದೆ, ಜಿಲ್ಲೆಯ ಜನರನ್ನು ಕತ್ತಲಲ್ಲಿಟ್ಟು ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕವನ್ನು ಯಾವ ರೀತಿಯಿಂದಲೂ ಸೂಕ್ತವಲ್ಲದ ಭದ್ರಾವತಿಗೆ ರಾತ್ರೋರಾತ್ರಿ ಸ್ಥಳಾಂತರಿಸಿ ಶಿಲನ್ಯಾಸ ನೆರವೇರಿಸಲಾಗಿದೆ. ಇದು ಸದಾ ಕೋಮು ಉದ್ವಿಗ್ನತೆಯಿಂದ ನರಳುವ ದಕ್ಷಿಣ ಕನ್ನಡ ಜಿಲ್ಲೆಗೆ ಆಗಿರುವ ಅನ್ಯಾಯ. ಈ ಕತ್ತಲ ಕಾರ್ಯಾಚರಣೆಗೆ ಉದ್ರೇಕಕಾರಿ ಭಾಷಣಗಳಿಗೆ ಪ್ರಸಿದ್ದರಾದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲರ ಅಸಾಮರ್ಥ್ಯವೇ ಕಾರಣ ಎಂದು ಹೇಳಿದ್ದಾರೆ.
ಜಿಲ್ಲೆಗೆ ಮಾರಕವಾದ ಮಾಲಿನ್ಯಕಾರಿ ಯೋಜನೆಗಳನ್ನು ಮಂಗಳೂರಿಗೆ ಡಂಪ್ ಮಾಡಲು ಅವಕಾಶ ನೀಡುವ ಸಂಸದರು, ಜನೋಪಯೋಗಿ ಯೋಜನೆಗಳು ಕೈತಪ್ಪುವಾಗ ಧ್ವನಿ ಎತ್ತದೆ ಜಿಲ್ಲೆಗೆ ಸತತ ಅನ್ಯಾಯವಾಗಲು ಕಾರಣರಾಗಿದ್ದಾರೆ. ಈ ಹಿಂದೆ ಕರಾವಳಿಯ ಬ್ಯಾಂಕುಗಳು ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನ, ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ, ಇದೀಗ ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಸ್ಥಳಾಂತರ ಸಂಸದರ ಅಸಾಮರ್ಥ್ಯ, ವೈಫಲ್ಯಗಳ ಪಟ್ಟಿಯನ್ನು ದೀರ್ಘಗೊಳಿಸುತ್ತಿದೆ. ಸಂಸದ ನಳಿನ್ ಕುಮಾರ್ ಕಟೀಲ್ ತನ್ನ ಗಂಭೀರ ವೈಫಲ್ಯಗಳಿಗಾಗಿ ಜಿಲ್ಲೆಯ ಜನತೆಯೊಂದಿಗೆ ಕ್ಷಮಾಪಣೆ ಕೋರಬೇಕು ಎಂದು ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.
The central government which had decided to set to RAF unit in Mangalore has now planned to shift it to Shivamogaa.
25-11-24 05:51 pm
Bangalore Correspondent
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 02:44 pm
Mangalore Correspondent
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
Naxal Vikram Gowda, Murdeshwar, Mangalore: ಪೊ...
24-11-24 03:21 pm
Mangalore, Someshwara Suicide; ಸೋಮೇಶ್ವರ ರುದ್ರ...
24-11-24 01:18 pm
25-11-24 06:17 pm
HK News Desk
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm