ಬ್ರೇಕಿಂಗ್ ನ್ಯೂಸ್
17-01-21 07:10 pm Mangaluru Correspondent ಕರಾವಳಿ
ಕಾಸರಗೋಡು, ಜ.17: ಮಂಗಳೂರು - ತಿರುವನಂತಪುರಂ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ಕೈಗೊಳ್ಳಲಾಗಿದ್ದು ಗೂಡ್ಸ್ ಬೋಗಿಯಲ್ಲಿ ತುಂಬಿಸಿದ್ದ ಎರಡು ಬೈಕಿನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿ ಕಾಸರಗೋಡು ರೈಲ್ವೇ ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಗೂಡ್ಸ್ ಬೋಗಿಗೆ ದ್ವಿಚಕ್ರ ವಾಹನಗಳನ್ನು ತುಂಬಿಸುವ ವೇಳೆ ತಪಾಸಣೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ತನಿಖೆಯಲ್ಲಿ ಪತ್ತೆ ಮಾಡಲಾಗಿದೆ.

ಕಾಸರಗೋಡು ರೈಲ್ವೇ ನಿಲ್ದಾಣದಿಂದ ಎರಡು ಬೈಕ್ ಗಳನ್ನು ಲೋಡ್ ಮಾಡಿದ್ದು ಅದನ್ನು ತಿರುವನಂತಪುರ ಸಮೀಪದ ಪಾರಶಾಲಾ ಎಂಬಲ್ಲಿಗೆ ಒಯ್ಯಲಾಗುತ್ತಿತ್ತು. ಆದರೆ, ಬೈಕನ್ನು ರೈಲಿಗೆ ಲೋಡ್ ಮಾಡುವ ಮೊದಲು ಅದರಲ್ಲಿ ಪೆಟ್ರೋಲ್ ಟ್ಯಾಂಕ್ ಪೂರ್ತಿ ಖಾಲಿ ಮಾಡಿರಬೇಕೆಂಬ ನಿಯಮ ಇದೆ. ಬೈಕಿನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಮೂಡಿರುವುದರಿಂದ ರೈಲ್ವೇ ಸಿಬಂದಿ ಲೋಡಿಂಗ್ ವೇಳೆ ಪರಿಶೀಲನೆ ನಡೆಸಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲೇ ರೈಲು ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಪಾಲಕ್ಕಾಡ್ ರೈಲ್ವೇ ವಿಭಾಗ ಆದೇಶ ಮಾಡಿದೆ.
ಮಂಗಳೂರಿನಿಂದ ತಿರುವನಂತಪುರಕ್ಕೆ ಸಾಗುತ್ತಿದ್ದ ಮಲಬಾರ್ ಎಕ್ಸ್‌ಪ್ರೆಸ್ ರೈಲು ಕೊನೆ ನಿಲ್ದಾಣ ತಲುಪುವುದಕ್ಕೆ 40 ಕಿಮೀ ದೂರ ಇರುವಾಗ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ವರ್ಕಳ ಎಂಬಲ್ಲಿ ಗೂಡ್ಸ್ ಬೋಗಿಗೆ ಬೆಂಕಿ ಹತ್ತಿಕೊಂಡಿತ್ತು. ಗೂಡ್ಸ್ ಬೋಗಿಯಾಗಿದ್ದರಿಂದ ಸಾವು ನೋವು ಸಂಭವಿಸಿರಲಿಲ್ಲ. ಹಿಂಭಾಗದ ಬೋಗಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಿಳಿದ ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಬಳಿಕ ಇತರೇ ಬೋಗಿಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಲಾಗಿತ್ತು.
Also Read: ಮಂಗಳೂರು - ತಿರುವನಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Bikes that were loaded in the goods bogie caused the major train mishap of a fire in a moving train from Mangaluru to Thiruvananthapuram on Sunday in Kasargod.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm