ಬ್ರೇಕಿಂಗ್ ನ್ಯೂಸ್
20-01-21 07:54 pm Mangaluru Correspondent ಕರಾವಳಿ
ಮಂಗಳೂರು, ಜ.20: ಓವರ್ ಟೇಕ್ ಮಾಡುವ ನೆಪದಲ್ಲಿ 23 ನಂಬರ್ ರೂಟಿನ ಚಾಲಕರಾದ ಸಂಪತ್ ಪೂಜಾರಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲು ಪ್ರಯತ್ನಿಸಿದ್ದು ಬಹಳ ಗಂಭೀರ ಪ್ರಕರಣವಾಗಿದ್ದು ಈ ಕೃತ್ಯವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡಿಸಿದೆ.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದುಗಳ ಮೇಲೆ ಹಲ್ಲೆ ಮುಂತಾದ ಗಂಭೀರ ಪ್ರಕರಣಗಳು ನಡೆಯುತ್ತಿದ್ದು ಮುಂದುವರಿದ ಭಾಗವಾಗಿ ಬಸ್ ಚಾಲಕನಿಗೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ಇದನ್ನು ನೋಡುವಾಗ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸಿ ನಾಗರಿಕರನ್ನು ಆತಂಕಗೊಳಿಸುತ್ತಿರುವುದು ಕಂಡುಬರುತ್ತಿದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟು ಕೊಲೆಯತ್ನಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಬಸ್ ಚಾಲಕ ಸಂಪತ್ ಪೂಜಾರಿಯನ್ನು ಭೇಟಿ ಮಾಡಿದ ವಿಶ್ವ ಹಿಂದು ಪರಿಷದ್ ಬಜರಂಗದಳದ ಪ್ರಮುಖರು, ಧೈರ್ಯ ತುಂಬಿದರು. ಅಲ್ಲದೆ, ಆರೋಪಿ ಅಶ್ರಫ್ ನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್, ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮತ್ತು ನಾಗುರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಉಪಸ್ಥಿತರಿದ್ದರು.
Also Read: ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
Vhp Demands arrest of the biker who poured petrol on a private bus driver at Faisal Nagar near Padil following an argument on Tuesday, January 19.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm