ಬ್ರೇಕಿಂಗ್ ನ್ಯೂಸ್
29-01-21 03:13 pm Mangalore Correspondent ಕರಾವಳಿ
ಮಂಗಳೂರು, ಜ.29: ಈ ಬಾರಿ ಕೋವಿಡ್ ಕಾರಣದಿಂದ ಕಂಬಳ ಆಗುತ್ತೋ ಇಲ್ಲವೋ ಎನ್ನುವ ಆತಂಕ ಇತ್ತು. ನವೆಂಬರ್ ನಲ್ಲಿ ಅನ್ ಲಾಕ್ ಘೋಷಣೆಯಾಗಿ ವ್ಯಾಪಾರ, ವಹಿವಾಟು ಸಹಜಗೊಂಡರೂ, ಕಂಬಳಕ್ಕೆ ಅವಕಾಶ ಸಾಧ್ಯವಿಲ್ಲವೆಂದೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೇಳಿತ್ತು. ಯಾಕಂದ್ರೆ, ಕಂಬಳದಲ್ಲಿ ಸಾವಿರಾರು ಜನ ಸೇರುತ್ತಾರೆ, ಅಂತರ ಕಾಪಾಡುವುದು ಸಾಧ್ಯ ಆಗುವುದಿಲ್ಲ. ನಿಯಂತ್ರಣ ಮಾಡೋಕೆ ಸಾಧ್ಯ ಆಗಲ್ಲ ಎಂದಿತ್ತು. ಆದರೆ, ಕಂಬಳ ಅಭಿಮಾನಿಗಳ ಸತತ ಪರಿಶ್ರಮ, ರಾಜಕೀಯ ಒತ್ತಡದ ಕಾರಣ ಕೊನೆಗೂ ಕಂಬಳಕ್ಕೆ ಹಸಿರು ನಿಶಾನೆ ಲಭಿಸಿದೆ.
ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ 'ವೀರ-ವಿಕ್ರಮ' ಜೋಡುಕರೆ ಬಯಲು ಕಂಬಳಕ್ಕೆ ವೇದಿಕೆ ಸಿದ್ಧವಾಗಿದ್ದು ಎಂದಿನಂತೆ ನಾಳೆ, ಜ.30ರ ಶನಿವಾರ ಮತ್ತೆ ಕೋಣಗಳು ಕಂಬಳದ ಕರೆಗೆ ಇಳಿಯಲಿವೆ. ಅಲೆ ಬುಡಿಯೆರ್ ಎನ್ನುವ ಕಂಚಿನ ಕಂಠದ ಘೋಷಣೆಯ ನಿನಾದ ಹಳ್ಳಿಗಳಲ್ಲಿ ಮಾರ್ದನಿಸಲಿದೆ.
ಹೊಕ್ಕಾಡಿಗೋಳಿ, ಎಲಿಯ ನಡುಗೋಡು, ಆರಂಬೋಡಿ, ಪೂಂಜ ಎನ್ನುವ ಅತ್ತ ಬೆಳ್ತಂಗಡಿ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ವಾಮದಪದವು ಆಸುಪಾಸಿನ ಗ್ರಾಮಗಳಂದ್ರೆ ಅಪ್ಪಟ ಹಳ್ಳಿ ಸೊಗಡನ್ನು ಘಮಿಸುವ ಪ್ರದೇಶಗಳು. ಅಲ್ಲಿನ ಜನರ ಪಾಲಿಗೆ ಈ ಬಾರಿಯ ಕಂಬಳ ಊರ ಉತ್ಸವ ಆಗಿ ಮಾರ್ಪಟ್ಟಿದೆ. ಕಂಬಳ ಇಲ್ಲ ಎನ್ನುತ್ತಿದ್ದ ಸಂದರ್ಭದಲ್ಲಿ ಮೊದಲ ಕಂಬಳವನ್ನೇ ಅಲ್ಲಿ ಮಾಡುತ್ತಿರುವುದು ಊರ ಜನರಿಗೆ ಹೆಮ್ಮೆ. ಕಳೆದ ಹಲವಾರು ದಿನಗಳಿಂದ ಈ ಭಾಗದ ಜನ ಶ್ರಮದಾನದ ಮೂಲಕ ಕಂಬಳದ ಕರೆಯನ್ನು ಸಜ್ಜುಗೊಳಿಸಿದ್ದಾರೆ. ಮೊದಲ ಕಂಬಳದ ಅದ್ದೂರಿಗೆ ಕೊರತೆಯಾಗದಂತೆ ಎಂದಿನ ಗೌಜಿಯಲ್ಲೇ ಕೋಣಗಳು ಅಂಕದ ಗದ್ಧೆಗೆ ಇಳಿಯಲು ತಯಾರಿ ನಡೆಸಿದ್ದಾರೆ.
ಜಿಲ್ಲಾ ಕಂಬಳ ಸಮಿತಿಯ ನಿರ್ಧಾರದಂತೆ ಕೋವಿಡ್ ನಿಯಮಾವಳಿ ಪಾಲಿಸಿಕೊಂಡೇ ಕಂಬಳ ಮಾಡಲಾಗುತ್ತದೆ. ಒಟ್ಟು 150ಕ್ಕೂ ಮಿಕ್ಕಿ ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೊಕ್ಕಾಡಿಗೋಳಿ ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.
ಕಂಬಳ ಕೂಟಕ್ಕೆ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಸ್ಥಳೀಯ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಚಾಲನೆ ನೀಡಲಿದ್ದು, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಮೂಡುಬಿದ್ರೆ ಚೌಟರ ಅರಮನೆ ಕುಲದೀಪ್ ಎಂ. ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಕಂಬಳದ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದು, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹಿತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ, ಭಟ್ಕಳ ಶಾಸಕ ಸುನಿಲ್ ನಾಯಕ್, ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಶಾಸಕರಾದ ಹರೀಶ ಪೂಂಜ, ಉಮಾನಾಥ ಕೋಟ್ಯಾನ್, ಪ್ರತಾಪಸಿಂಹ ನಾಯಕ್, ಕೆ.ಹರೀಶ ಕುಮಾರ್, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್,ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಹೈಕೋರ್ಟ್ ಎಡಿಷನಲ್ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್, ರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ಪ್ರಶಾಂತ್ ರೈ , ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ ಮತ್ತಿತರ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.
ರಾತ್ರಿ ಸಹಿತ ಕಂಬಳ ನಿರಂತರ !
ಜನವರಿ ಆರಂಭದಲ್ಲಿ ಕಂಬಳ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿದಾಗ, ಹಗಲು ಮಾತ್ರ ಕಂಬಳಕ್ಕೆ ಅನುಮತಿ ನೀಡಲಾಗಿತ್ತು. ಆದರೆ, ಕೊನೆಗೆ ಜಿಲ್ಲಾ ಕಂಬಳ ಸಮಿತಿ ಪದಾಧಿಕಾರಿಗಳು ಸೇರಿ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಮನವರಿಕೆ ಮಾಡಿಕೊಟ್ಟು ಹಗಲು ಮಾತ್ರ ಕಂಬಳ ನಡೆದಲ್ಲಿ ಆಗುವ ಸಮಸ್ಯೆಗಳನ್ನು ಮುಂದಿಟ್ಟಿದ್ದರು. ಬಳಿಕ ಜಿಲ್ಲಾಧಿಕಾರಿಯೂ ಅದಕ್ಕೆ ಒಪ್ಪಿಗೆ ಸೂಚಿಸಿ, ರಾತ್ರಿಯೂ ನಿರಂತರ ಕಂಬಳ ನಡೆಸಲು ಅವಕಾಶ ನೀಡಿದ್ದಾರೆ. ಆದರೆ, ಕೋವಿಡ್ ನಿಯಮಗಳನ್ನು ಪಾಲುಸಬೇಕು, ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.
This Kambala season is getting official start after a delay of two months because of coronavirus concerns. The first Kambala of the season in the form of Jodukare Kambala, will be held under the supervision of Undivided Dakshina Kannada District Kambala Samithi, at Bantwal on Saturday January 30.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm