ಬ್ರೇಕಿಂಗ್ ನ್ಯೂಸ್
30-01-21 10:40 pm Mangaluru Correspondent ಕರಾವಳಿ
ಮಂಗಳೂರು, ಜ.30: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ.
ಅಲ್ಲದೆ, ಘಟನೆಗೆ ಸಂಬಂಧಿಸಿ ಹೆಚ್ಚುವರಿ ಇಲಾಖಾ ತನಿಖೆ ಕೈಗೊಂಡು ವಿಚಾರಣಾ ವರದಿ ನೀಡುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಸೂಚಿಸಲಾಗಿದೆ.
ಪ್ರಕರಣದಲ್ಲಿ ಎಎಸ್ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವಾ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಅಲ್ಲದೆ, ನಾಳೆಯೇ ಅವರು ತಮಗೆ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಮ್ಮ ಪ್ರಯತ್ನದ ನಡುವೆ ಈ ರೀತಿಯ ಘಟನೆ ನಡೆದಿರುವುದು ಪೊಲೀಸರ ಘನತೆಗೆ ಕುಂದು ತಂದಿದೆ. ಕರ್ತವ್ಯದ ಸಮಯದಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯ ಜೊತೆಗೆ ಜೊತೆಗೆ ಕುಳಿತು ಟೇಬಲ್ ಹಂಚಿಕೊಂಡಿದ್ದು ತಪ್ಪೆಂದು ಪರಿಗಣಿಸಲಾಗಿದೆ. ಹೀಗಾಗಿ ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದ ಎಣ್ಣೆ ಪಾರ್ಟಿಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
Read: ಮಂಗಳೂರು ಸಿಸಿಬಿ ಸಿಬಂದಿ ಎಣ್ಣೆ ಪಾರ್ಟಿ ; ತನಿಖೆಗೆ ಸೂಚಿಸಿದ ಕಮಿಷನರ್
In connection to CCB police personals drinking in a bar at Thokottu in Mangalore, Police Commissioner Shashi Kumar has transferred eight of the CCB police personals to Various Police Stations of Mangalore.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm