ಬ್ರೇಕಿಂಗ್ ನ್ಯೂಸ್
31-01-21 05:08 pm Mangaluru Correspondent ಕರಾವಳಿ
ಮಂಗಳೂರು, ಜ.31: ಪ್ರತಿ ನಾಗರಿಕನಿಗೂ ಶುದ್ಧ ಕುಡಿಯುವ ನೀರು ಅವಶ್ಯಕವಾಗಿದ್ದು ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಬಂಟ್ವಾಳ ತಾಲೂಕಿನ ಸ್ಪರ್ಶ ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಂತೆ ಬಹುಗ್ರಾಮ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯಡಿ 62 ಕೋಟಿ ರೂ. ಅನುದಾನದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.
ನೀರಿನ ಮೂಲಗಳಾದ ಕೆರೆ, ನದಿ, ಅಣೆಕಟ್ಟುಗಳಿಂದ ನೀರನ್ನು ಸಂಗ್ರಹಿಸಿ ರಾಜ್ಯದ ಪ್ರತಿ ಮನೆ ಮನೆಗೂ ನೀರು ತಲುಪುವಂತಾಗಬೇಕು ಹಾಗೂ ದಿನದ 24 ಗಂಟೆಗಳ ಕಾಲವೂ ಶುದ್ಧ ಕುಡಿಯುವ ನೀರು ಪೂರೈಕೆ ಆಗಬೇಕು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು ತಮ್ಮ ಜಿಲ್ಲೆಯಲ್ಲಿ ಯಾವ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇವೆ ಎಂದು ಗುರುತಿಸಿ ಅದನ್ನು ಸರಿಪಡಿಸಲು ಕಾರ್ಯವನ್ನು ಮಾಡಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕುಡಿಯುವ ನೀರಿನ ಯೋಜನೆಯು ಬಹಳ ವೇಗವಾಗಿ, ಸಮರ್ಪಕವಾಗಿ ಹಾಗೂ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ನಿರ್ಮಾಣವಾಗಿರುವುದು ಬಹಳ ಸಂತೋಷಕರ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಮಾತನಾಡಿ, ಬಂಟ್ವಾಳ ತಾಲೂಕು ನರಿಕೊಂಬು ಮತ್ತು ಇತರೆ 38 ಜನ ವಸತಿ ಪ್ರದೇಶಗಳಿಗೆ ಹಾಗೂ ಸರಪಾಡಿ ಮತ್ತು ಇತರೆ 95 ಜನ ವಸತಿ ಪ್ರದೇಶಗಳಿಗೆ 22.55 ಕೋಟಿ ಮತ್ತು 38.70 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ ಎಂದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಒಟ್ಟು 39 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ಯೋಜನೆಗಳು 30 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಿರುತ್ತದೆ. ಇನ್ನುಳಿದ ವೀರಕಂಬ, ಬೋಳಂತೂರು, ಸಜೀಪ ಮುನ್ನೂರು, ಸಜೀಪ ಮೂಡ ಮತ್ತು ಮಂಚಿ ಗ್ರಾಮ ಪಂಚಾಯತಿಗಳ ಒಟ್ಟು 49 ಜನ ವಸತಿ ಪ್ರದೇಶಗಳಿಗೆ ಹಾಗೂ ಉಳ್ಳಾಲ ನಗರಸಭೆ, ಕೋಟೆಕಾರು ಪಟ್ಟಣ ಪಂಚಾಯತಿಗಳಿಗೆ ನೇತ್ರಾವತಿ ನದಿಯಿಂದ ನೀರು ಸರಬರಾಜು ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಕೇಂದ್ರ ಜಲ ಜೀವನ ಮಿಷನ್ ಯೋಜನೆಯಡಿ 2024 ರ ಒಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೆ ನಳಗಳ ಮೂಲಕ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆಗೆ ಸಂಬಂದಿಸಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 30 ಗ್ರಾಮ ಪಂಚಾಯತಿಗಳ 46 ಗ್ರಾಮಗಳಿಗೆ ಅಂದಾಜು 33.72 ಕೋಟಿ ವೆಚ್ಚದ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದ್ದು, ಈ ಯೋಜನೆ ಅನುಷ್ಟಾನಗೊಳ್ಳಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು, ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸೆಲ್ವಮಣಿ. ಆರ್, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಪಂ ಅಭಿಯಂತರರಾದ ನರೇಂದ್ರ ಬಾಬು, ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ, ಮಂಜುಳಾ, ಕಮಲಾಕ್ಷೀ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm