ಮನೆಗೆ ನುಗ್ಗಿ ಗೃಹಿಣಿಯ ಕಟ್ಟಿಹಾಕಿ ಉಸಿರುಗಟ್ಟಿಸಿ ಕೊಲೆಗೈದ ಹಂತಕರು !

03-02-21 11:04 am       Mangalore Correspondent   ಕರಾವಳಿ

ಮನೆಗೆ ನುಗ್ಗಿದ ಆಗಂತುಕರು ಮಹಿಳೆಯ ಮುಖಕ್ಕೆ ಹಾಸಿಗೆ ಹಿಡಿದು ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಮಂಡ್ಯ, ಫೆ.3 : ಮನೆಗೆ ನುಗ್ಗಿದ ಆಗಂತುಕರು ಮಹಿಳೆಯ ಕೈ ಕಾಲುಗಳನ್ನ ಕಟ್ಟಿ ಹಾಕಿ, ಮುಖಕ್ಕೆ ಹಾಸಿಗೆ ಹಿಡಿದು ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ವಿವಿ ನಗರದಲ್ಲಿ ಮಹಿಳೆ ಕುಟುಂಬದೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿದ ಯಾರೋ ಕಿರಾತಕರು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಮನೆಗೆ ಪತಿ ಮತ್ತು ಮಗ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಅತ್ಯಾಚಾರಗೈದು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಕುಟುಂಬಸ್ಥರ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮದ್ದೂರು ಜನತೆಯಲ್ಲಿ ಆತಂಕ ಮನೆ ಮಾಡಿದೆ.

A housewife has been strangled to death and also rape has been suspected in Mandya. Maddur Police are investigating the case.