ಉಳ್ಳಾಲದ ನರ್ಸಿಂಗ್ ಕಾಲೇಜು, ಹಾಸ್ಟೆಲ್ ಸೀಲ್ ಡೌನ್ ! ಒಂದೇ ದಿನ 40 ವಿದ್ಯಾರ್ಥಿಗಳಿಗೆ ಕೊರೊನಾ !

03-02-21 12:20 pm       Mangalore Correspondent   ಕರಾವಳಿ

ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. 

ಮಂಗಳೂರು, ಫೆ.3 : ಮಂಗಳೂರು ನಗರ ಹೊರವಲಯ ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. 

ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನಲ್ಲಿ 100 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು ಈ ಪೈಕಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. 40 ವಿದ್ಯಾರ್ಥಿಗಳು ಕೂಡ ಕೇರಳದಿಂದ ಶಿಕ್ಷಣಕ್ಕಾಗಿ ಬಂದಿದ್ದವರು ಎನ್ನುವುದು ಇಲ್ಲಿ ವಿಶೇಷ. 

ವಿದ್ಯಾರ್ಥಿಗಳು ಕಾಲೇಜಿನ ಹಾಸ್ಟೆಲ್ ನಲ್ಲೇ ಉಳಿದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ಸದ್ಯ ಬಹಳಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಾಲೇಜು ಮತ್ತು ಹಾಸ್ಟೆಲ್ ಅನ್ನು ಸೀಲ್ ಡೌನ್ ಮಾಡಿದ್ದು ಪ್ರವೇಶ ನಿರ್ಬಂಧಿಸಲಾಗಿದೆ.‌

ಆ ಜಾಗವನ್ನು ಕಂಟೈನ್ ಮೆಂಟ್ ಝೋನ್ ಆಗಿ ಜಿಲ್ಲಾಡಳಿತ ಘೋಷಿಸಿ ನಿರ್ಬಂಧ ಹೇರಿದೆ. ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಿಬಂದಿ ಹೊರಬರುವಂತಿಲ್ಲ. ಅಲ್ಲಿಗೆ ಹೊರಗಿನ ಸಿಬಂದಿಯಾಗಲೀ, ವಿದ್ಯಾರ್ಥಿಗಳಾಗಲೀ ಹೋಗುವಂತಿಲ್ಲ. 

ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಆಗುವುದು ತುಂಬ ಕಡಿಮೆಯಾಗಿತ್ತು. ಕೇರಳದಲ್ಲಿ ಭಾರೀ ಹೆಚ್ಚು ಹರಡುವಿಕೆ ಇರುವುದರಿಂದ ಅಲ್ಲಿಂದ ಬಂದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿತ್ತು.

40 Students of a Nursing College have been tested Covid positive in the Hostel in Ullal. The health department has seal downed the hostel and the nursing college.