ಬ್ರೇಕಿಂಗ್ ನ್ಯೂಸ್
04-02-21 11:49 am Mangalore Correspondent ಕರಾವಳಿ
ಮಂಗಳೂರು, ಫೆ.4 : ಕಾರೊಂದು ಮರಕ್ಕೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಳಾಯಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ, ಬೋಂದೆಲ್‌ನಲ್ಲಿ ವಾಸಿಸುತ್ತಿದ್ದ ಸುಹಾನಾ (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸುಹಾನಾ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ಕುಟುಂಬ ನಿನ್ನೆ ರಾತ್ರಿ ನಗರಕ್ಕೆ ಆಗಮಿಸಿ ಆಹಾರ ಪಾರ್ಸೆಲ್ ಮಾಡಿಸಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ರಾಹಿಲ್ ಶಮೀಮ್‌ಗೆ ವಿರುದ್ಧ ದಿಕ್ಕಿನಲ್ಲಿ ವಾಹನ ಬರುತ್ತಿದೆ ಎಂದು ಭ್ರಮಿಸಿ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಕಾರು ಮರಕ್ಕೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು, ಆ ಪೈಕಿ ಸುಹಾನಾ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಮುಹಮ್ಮದ್ ರಿಯಾಝ್ ನೀಡಿದ ದೂರಿನಂತೆ ಸಂಚಾರ ಉತ್ತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A woman was killed after their car hit a tree at Kulai in Mangalore. Three have been seriously injured. North Police have registered the case.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm