ಬ್ರೇಕಿಂಗ್ ನ್ಯೂಸ್
04-02-21 07:44 pm Mangaluru Correspondent ಕರಾವಳಿ
ಮಂಗಳೂರು, ಫೆ.4: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಉಳಿದ ಖಾಸಗಿ ಹಿಂದು ದೇವಸ್ಥಾನಗಳನ್ನು ಕಲಂ 53ರ ಅಡಿಯಲ್ಲಿ ನೋಂದಣಿ ಮಾಡಿಸಲು ಸರಕಾರ ಮುಂದಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಎಲ್ಲ ಖಾಸಗಿ ದೇವಸ್ಥಾನಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಇದನ್ನು ತಕ್ಷಣದಿಂದಲೇ ಹಿಂಪಡೆಯಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ವಿಹಿಂಪ ಪ್ರಾಂತ ಸಂಚಾಲಕ ಎಂ.ಬಿ.ಪುರಾಣಿಕ್, ಈ ರೀತಿಯ ಸುತ್ತೋಲೆ ಹೊರಡಿಸಿದ್ದು ಸರಕಾರದ ಹಿಂದು ವಿರೋಧಿ ನಿಲುವಾಗಿದ್ದು, ಖಾಸಗಿ ದೇವಸ್ಥಾನಗಳ ವಾರ್ಷಿಕ ಲೆಕ್ಕಪತ್ರ, ಅಲ್ಲಿ ಏನೆಲ್ಲ ಸೊತ್ತುಗಳಿವೆ ಎಂಬ ಬಗ್ಗೆ ಲೆಕ್ಕ ಕೊಡಲು ಸೂಚಿಸಲಾಗಿದೆ. ಇದು ಹಿಂದು ದೇವಸ್ಥಾನಗಳಿಗೆ ಮಾತ್ರ ಸೀಮಿತ ಮಾಡಿದ್ದು ಯಾಕೆ ? ಇಂಥದ್ದೇ ನಿಲುವು ಕ್ರಿಸ್ತಿಯನ್ನರ ಚರ್ಚ್ ಮತ್ತು ಮುಸ್ಲಿಮರ ಮಸೀದಿಗಳಿಗೆ ಯಾಕೆ ಅನ್ವಯ ಮಾಡಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಬಾರಿ ಕಾಂಗ್ರೆಸ್ ಸರಕಾರ ಇದ್ದಾಗ 2015ರ ಆಗಸ್ಟ್ ತಿಂಗಳಲ್ಲಿ ಈ ರೀತಿಯ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಹೊರಡಿಸಲಾಗಿತ್ತು. ಅದನ್ನು ಮಾರ್ಪಾಡುಗೊಳಿಸಿ ಈಗಿನ ಬಿಜೆಪಿ ಸರಕಾರ 2020ರ ನವೆಂಬರ್ ತಿಂಗಳಲ್ಲಿ ಜಾರಿ ಮಾಡಿದ್ದು, ಅನುಷ್ಠಾನಕ್ಕೆ ತರುತ್ತಿದೆ. ಖಾಸಗಿ ಹಿಂದು ದೇವಸ್ಥಾನಗಳಿಗೆ ಅಧಿಕಾರಿಗಳು ನೋಟೀಸ್ ನೀಡಿ, ಚರಾಸ್ತಿ, ಸ್ಥಿರಾಸ್ತಿ ಮತ್ತು ವಾರ್ಷಿಕ ಆದಾಯದ ಬಗ್ಗೆ ಮಾಹಿತಿ ನೀಡಲು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ತಿಂಗಳಲ್ಲಿ ಲೆಕ್ಕಪತ್ರ ನೀಡದಿದ್ದರೆ ತಾವೇ ಬಂದು ಆ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ. ಮಾಹಿತಿ ನೀಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ. ಈ ರೀತಿಯ ಒತ್ತಡವನ್ನು ಚರ್ಚ್, ಮಸೀದಿಗಳಿಗೂ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು.
ಮುಜರಾಯಿ ಇಲಾಖೆಯ ದೇವಸ್ಥಾನಗಳಿಗಿಂತ ಹೆಚ್ಚು ಜನಸ್ನೇಹಿಯಾಗಿ ಸೇವಾ ಚಟುವಟಿಕೆಗಳನ್ನು ಖಾಸಗಿ ದೇವಸ್ಥಾನಗಳು ನಡೆಸಿಕೊಂಡು ಬಂದಿವೆ. ರಾಜ್ಯದಲ್ಲಿ ಈ ರೀತಿಯ ಸಾವಿರಾರು ದೇವಸ್ಥಾನಗಳಿದ್ದು, ಇಂಥ ನೋಟೀಸ್ ನೀಡಿ ಹಿಂದು ಶ್ರದ್ಧಾಕೇಂದ್ರಗಳನ್ನು ಸರಕಾರೀಕರಣಗೊಳಿಸಲು ಹುನ್ನಾರ ನಡೆಸುತ್ತಿದೆ. ಸರಕಾರಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಮೊದಲ ಹೆಜ್ಜೆ. ತಕ್ಷಣದಿಂದಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ನಾವು ಯಾವುದೇ ಹೋರಾಟಕ್ಕೂ ಸಿದ್ಧವಾಗಿದ್ದೇವೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಇದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm