ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm