ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm