ತುಳು ಅಕಾಡೆಮಿ ಅಧ್ಯಕ್ಷರ ಕಾರು ಅಪಘಾತ ; ಅಪಾಯದಿಂದ ಪಾರು

06-02-21 10:29 am       Mangalore Correspondent   ಕರಾವಳಿ

ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು, ಫೆ.6: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಶನಿವಾರ ಮುಂಜಾವಿನಲ್ಲಿ ಕತ್ತಲ್ಸಾರ್ ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಕತ್ತಲ್ ಸಾರ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ‌

ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Tulu academy president Dayananda Kattalsar Meets with an accident after a fish truck hit his car at Nantoo in Mangalore. He has been admitted to the hospital with minor injuries.