ಬ್ರೇಕಿಂಗ್ ನ್ಯೂಸ್
09-02-21 05:10 pm Udupi Correspondent ಕರಾವಳಿ
ಉಡುಪಿ, ಫೆ.9: ದೇವರ ದರ್ಶನಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಯೊಬ್ಬರು ಉಡುಪಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯಲ್ಲಿ ದೇವರ ದರ್ಶನ ಪಡೆದುಕೊಂಡು, ಊರಿಗೆ ಹೊರಡಲೆಂದು ಸರಕಾರಿ ಬಸ್ ನಿಲ್ದಾಣದಲ್ಲಿ ಸಿದ್ಧತೆಯಲ್ಲಿದ್ದಾಗ, ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ವಿಷಯ ತಿಳಿದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಯಾತ್ರಾರ್ಥಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಪೊಲೀಸರು ಮೃತರ ಬ್ಯಾಗಿನಲ್ಲಿ ದೊರೆತ ಚೀಟಿಗಳ ಆಧಾರದಿಂದ ಮೃತರ ಸಂಬಂಧಿಕರ ವಿಳಾಸ ಪತ್ತೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಮೃತ ಯಾತ್ರಾರ್ಥಿ, ರಮೇಶ್ ರಾವ್ ಟೈಲರ್ (63) ವಿನಾಯಕ ನಗರ, ನಾಯಂಡ ಹಳ್ಳಿ, ಬೆಂಗಳೂರಿನ ನಿವಾಸಿಯೆಂದು ತಿಳಿದುಬಂದಿದೆ.
ಬಳಿಕ ಮೃತರ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಶವಸಂಸ್ಕಾರ ನಡೆಸಲು ಅಸಹಾಯಕತೆ ತೋರಿದರು. ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ನೀಡಿದ ಸಲಹೆಯಂತೆ ಕುಟುಂಬಿಕರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ಸಂಪರ್ಕಿಸಿದ್ದು ಅಸಹಾಯಕತೆ ಹೇಳಿಕೊಂಡಿದ್ದರು.
ತಕ್ಷಣ ನೆರವಿಗೆ ಬಂದಿದ್ದು ಶವ ಪರೀಕ್ಷೆ ಬಳಿಕ ಉದ್ಯಾವರ ಹಿಂದು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯಸಂಸ್ಕಾರವನ್ನು ನಡೆಸಿಕೊಟ್ಟಿದ್ದಾರೆ.
Bangalorean Devotee who came to Krishna Temple at Udupi breathed his last while he was at the temple. The final rituals to take place at Udupi.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm