ಬ್ರೇಕಿಂಗ್ ನ್ಯೂಸ್
10-02-21 10:58 pm Mangaluru Correspondent ಕರಾವಳಿ
ಮಂಗಳೂರು, ಫೆ.10: ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಕಂ ಭದ್ರತಾ ಸಿಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ ಅಧಿಕಾರಿಗಳೇ, ಯಾರಿಗೂ ಕೂಡ ಈ ರೀತಿ ಹಿಂಸೆ ಕೊಡಬೇಡಿ ಎಂದು ಬರೆದಿದ್ದಾರೆ. ತೀವ್ರ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರವನ್ನು ಹೇಳಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರು ಮೂಲದ ಬಾಲಕೃಷ್ಣ (48) ಸಾವನ್ನಪ್ಪಿದವರು. ಸಂಸ್ಥೆಯಲ್ಲಿ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಸಂಬಂಧಪಟ್ಟ ಅಧಿಕಾರಿಗಳೇ.. ಈ ರೀತಿ ಯಾರಿಗೂ ಹಿಂಸೆ ಮಾಡಬೇಡಿ, ಸಣ್ಣಸಣ್ಣ ಮಕ್ಕಳಿರುತ್ತಾರೆ, ಅವರನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ.. ಆದರೂ ಈ ಹಿಂಸೆ ಅನುಭವಿಸಲು ಸಾಧ್ಯವಾಗುತ್ತಿಲ್ಲ..




‘ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಬರೆದಿರುವ ಅವರು, ತನ್ನ ಅಣ್ಣನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಅಂತ್ಯಸಂಸ್ಕಾರಕ್ಕೂ ಅಣ್ಣನನ್ನು ಕರೆಯಬೇಡಿ. ಆತನಿಂದ ಯಾವುದೇ ಧನಸಹಾಯವನ್ನೂ ಪಡೆಯಬೇಡಿ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಅವರೇನೂ ತಪ್ಪು ಮಾಡಿಲ್ಲ’ ಎಂದು ಅವರು ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು ಸಂಜೆ ಹೊತ್ತಿಗೆ ಶವ ಪತ್ತೆಯಾಗಿತ್ತು. ಇವರು ನದಿಗೆ ಹಾರುವುದನ್ನು ಯಾರೋ ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಮತ್ತು ಹೆದ್ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರು ನಿಂತು ನೋಡುತ್ತಿದ್ದರು. ಇದರಿಂದ ಹೆದ್ದಾರಿ ಬ್ಲಾಕ್ ಕೂಡ ಆಗಿತ್ತು.
A KSRTC Bus Conductor of Bantwal Unit ended his life by jumping from Neravathi railway bridge in mangalore blaming his KSRTC authorities for his death in the death note.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm