ಬ್ರೇಕಿಂಗ್ ನ್ಯೂಸ್
11-02-21 04:48 pm Mangalore Correspondent ಕರಾವಳಿ
ಉಳ್ಳಾಲ, ಫೆ.11: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಐ.ಟಿ.ಐ ಮತ್ತು ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಆರಂಭಿಸಲಾಗುವುದೆಂದು ಜವಳಿ, ಕೈಮಗ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ ಬಾಳಾ ಸಾಹೇಬ ಪಾಟೀಲ್ ಹೇಳಿದ್ದಾರೆ.
ಜಿಲ್ಲಾಡಳಿತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಣಾಜೆ, ಸರಕಾರಿ ಮುಸ್ಲಿಂ ವಸತಿ ಶಾಲೆ ಮಂಜನಾಡಿ ಇದರ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಕೊಣಾಜೆ, ಮೌಲಾನಾ ಆಝಾದ್ ಮಾದರಿ ಶಾಲೆ, ಪುದು, ಫರಂಗಿ ಪೇಟೆ ಮತ್ತು ಮೌಲಾನಾ ಆಝಾದ್ ಮಾದರಿ ಶಾಲೆ ಬೋಳಿಯಾರು ಮತ್ತು ಮೌಲಾನಾ ಆಝಾದ್ ಮಾದರಿ ಶಾಲೆ ಬೋಳಿಯಾರು ಮಂಜನಾಡಿ ಇದರ ನೂತನ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತ ಬಡ ಮಕ್ಕಳಿಗೆ ವೃತ್ತಿಪರ ಶಿಕ್ಷಣ ಕಲಿಯಲು ಉಪಯೋಗವಾಗುವ ನಿಟ್ಟಿನಲ್ಲಿ ಐ.ಟಿ.ಐ ಮತ್ತು ಪಾಲಿಟೆಕ್ನಿಕ್ ತರಗತಿಗಳನ್ನು ಮುಂದಿನ ಎರಡು ವರ್ಷದಲ್ಲಿ ಪ್ರತಿ ಜಿಲ್ಲೆಗಳಲ್ಲೂ ಆರಂಭಿಸುವುದಾಗಿ ಹೇಳಿದರು. ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ಮಂಜೂರುಗೊಳಿಸಿದ ಕಾಮಗಾರಿಗಳನ್ನು ನಾನಿಂದು ಉದ್ಘಾಟಿಸಿದ್ದೇನೆ. ಮುಂದಿನ ನನ್ನ ಅಧಿಕಾರವಧಿಯಲ್ಲಿ ಇನ್ನಷ್ಟು ಹೆಚ್ಚಿನ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತೇನೆ. ಯಾರಿಗೂ ಬೇಡದ ಖಾತೆಯನ್ನು ಮುಖ್ಯಮಂತ್ರಿಗಳು ನನಗೆ ವಹಿಸಿದಾಗ ಅತೀ ಆನಂದದಿಂದ ಸ್ಬೀಕರಿಸಿದ್ದೇನೆ. ಅಲ್ಪಸಂಖ್ಯಾತ ಕಲ್ಯಾಣ ಖಾತೆಯಲ್ಲಿ ಮೊದಲೇ ನನಗೆ ಹೆಚ್ಚಿನ ಒಲವಿತ್ತು. ಮದರಸಗಳಲ್ಲಿ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣದ ಜೊತೆ ಬೇರೆ ಸಿಲೆಬಸನ್ನು ಕಲಿಸಿದಲ್ಲಿ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುವುದು ಎಂದರು.
ಶಾಸಕ ಯು.ಟಿ ಖಾದರ್ ಮಾತನಾಡಿ, ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿಗೆ ಕಟ್ಟಡಗಳು ತಯಾರಾಗಿವೆ. ಬಡತನ, ಕಷ್ಟಗಳನ್ನು ದೂರ ಮಾಡಿ ಸ್ವಾಭಿಮಾನದ ಬದುಕು ರೂಪಿಸಲು ಶಿಕ್ಷಣದಿಂದಲೇ ಸಾಧ್ಯ. ಬಡತನದಲ್ಲಿ ಹುಟ್ಟಬಹುದು, ಬಡತನದಲ್ಲೇ ಸಾಯಬೇಕೆಂದೇನಿಲ್ಲ. ಕ್ಷೇತ್ರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಶಿಕ್ಷಣ ಸಂಸ್ಥೆಗಳಲ್ಲಿ ಇಡೀ ರಾಜ್ಯದ ಮಕ್ಕಳು ಕಲಿಯುತ್ತಿದ್ದು ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ತಾಪಂ ಅಧ್ಯಕ್ಷ ಮಹಮ್ಮದ್ ಮೋನು, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಂಜನಾಡಿ ಗ್ರಾ.ಪಂ. ಅಧ್ಯಕ್ಷೆ ನಸ್ರಿನಾ, ಕೊಣಾಜೆ ಗ್ರಾಪಂ ಅಧ್ಯಕ್ಷೆ ಚಂಚಲಾಕ್ಷಿ , ಉಪಾಧ್ಯಕ್ಷ ರಾಮಕೃಷ್ಣ ಪಟ್ಟೋರಿ, ಸದಸ್ಯರಾದ ನಝರ್ ಷಾ ಪಟ್ಟೋರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮಹಾಬಲೇಶ್ ನಾಯಕ್, ನಿರ್ದೇಶಕ ಮೆಹಬೂಬ ಪಾಷ, ಸಹಾಯಕ ಅಭಿಯಂತರ ವಿಜಯ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm