ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm