ಬ್ರೇಕಿಂಗ್ ನ್ಯೂಸ್
15-02-21 05:41 pm Mangalore Correspondent ಕರಾವಳಿ
ಉಳ್ಳಾಲ: ಫೆ.15 : ನರಿಂಗಾನ ಗ್ರಾಮ ಪಂಚಾಯತಿಯ 17 ಸ್ಥಾನಗಳಲ್ಲಿ 17 ಸ್ಥಾನಗಳನ್ನೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದು ಮಂಗಳೂರು ಕ್ಷೇತ್ರದಲ್ಲಿ ಹೊಸ ದಾಖಲೆಯಾಗಿತ್ತು. ಇದೀಗ ಪಂಚಾಯತಿ ಆಡಳಿತದ ಗಾದಿಗೆ ಇಬ್ಬರು ಆಯ್ಕೆಯಾಗಿದ್ದು ನೂತನ ಅಧ್ಯಕ್ಷರಾಗಿ ಶೈಲಜಾ ಶೆಟ್ಟಿ, ಉಪಾಧ್ಯಕ್ಷರಾಗಿ ನವಾಝ್ ಅವಿರೋಧ ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷರುಗಳಾಗಿ ಶೈಲಜಾ ಶೆಟ್ಟಿ ಹಾಗೂ ನವಾಝ್ ಸೋಮವಾರ ಅಧಿಕಾರ ಸ್ವೀಕರಿಸಿದರು. ನರಿಂಗಾನ ಗ್ರಾಮ ಪಂಚಾಯಿತಿಯ ಒಟ್ಟು 17 ಸದಸ್ಯರ ಪೈಕಿ 17 ಮಂದಿಯೂ ಕಾಂಗ್ರೆಸ್ ಬೆಂಬಲಿತರೇ ಆಯ್ಕೆಯಾಗಿರುವುದು ಮಂಗಳೂರು ಕ್ಷೇತ್ರದಲ್ಲಿ ದಾಖಲೆಯಾಗಿದೆ. ಈ ವೇಳೆ ಮಾತನಾಡಿದ ಉಪಾಧ್ಯಕ್ಷ ನವಾಝ್, ತಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಯೋಜನೆಯ ಅನುಷ್ಠಾನ, ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ನಿವೇಶನ ರಹಿತರಿಗೆ ನಿವೇಶನ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯಕ್ ಚುನಾವಣಾ ಅಧಿಕಾರಿಯಾಗಿದ್ದರು.ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಂಚಾಯಿತಿ ಸಮಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ ಹಾಗೂ ಜೋಸೆಫ್ ಕುಟಿನ್ಹಾ, ವಲಯಾಧ್ಯಕ್ಷ ಹನೀಫ್ ಚಂದಹಿತ್ಲು, ಪಜೀರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಫೀಕ್, ಮಾಜಿ ಉಪಾದ್ಯಕ್ಷ ಇಮ್ತಿಯಾಝ್, ನರಿಂಗಾನ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜಯಂತಿ, ಸಬೀರ್, ಶಾಂತಿ ಡಿಸೋಜ, ಮೊಹಮ್ಮದ್ ನವಾಝ್, ಲತೀಫ್ ಎಂ, ಸುನೀತಾ ಡಿಸೋಜ, ಗಿರಿಜಾ, ಅಬ್ದುಲ್ ರಹಿಮಾನ್ ಸಿ.ಎಚ್, ಮಹಮ್ಮದ್ ಫಯಾಝ್, ತಾಹಿರಾ, ಸಲೀಂ ಎ, ಮಲ್ಲಿಕಾ, ಮುರಲೀಧರ ಶೆಟ್ಟಿ, ಶೇಖಬ್ಬ, ಜ್ಯೋತಿ ಡಿಸೋಜ, ಸುಂದರ ಉಪಸ್ಥಿತರಿದ್ದರು.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm