ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm