ಬ್ರೇಕಿಂಗ್ ನ್ಯೂಸ್
18-02-21 11:27 am Mangaluru Correspondent ಕರಾವಳಿ
ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm