ಬ್ರೇಕಿಂಗ್ ನ್ಯೂಸ್
18-02-21 07:50 pm Mangaluru Correspondent ಕರಾವಳಿ
ಪುತ್ತೂರು, ಫೆ.18: ಬ್ಯಾಂಕ್ ಸಾಲ ಕಟ್ಟದ ಕಾರಣ ಮನೆ ಮುಟ್ಟುಗೋಲು ಹಾಕಲು ಬಂದ ಬ್ಯಾಂಕ್ ಸಿಬಂದಿ ಎದುರಲ್ಲೇ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದಲ್ಲಿ ಗುರುವಾರ ನಡೆದಿದೆ.
ಪುತ್ತೂರಿನ ಹಾರಾಡಿ ರೈಲ್ವೇ ರಸ್ತೆಯ ನಿವಾಸಿ ಉದ್ಯಮಿ ರಘುವೀರ್ ಪ್ರಭು ಎಂಬವರ ಪತ್ನಿ ಪ್ರಾರ್ಥನಾ ಪ್ರಭು (52) ಆತ್ಮಹತ್ಯೆ ಮಾಡಿಕೊಂಡವರು.

ರಾಷ್ಟ್ರೀಕೃತ ಬ್ಯಾಂಕ್‍ನಿಂದ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದ ಕಾರಣಕ್ಕೆ ಬ್ಯಾಂಕ್ ನೋಟೀಸ್ ಬಂದಿತ್ತು. ಬಳಿಕ ಕೋರ್ಟ್ ನೋಟೀಸ್ ಹೊರಡಿದ್ದು ಮನೆ ಮುಟ್ಟುಗೋಲು ಹಾಕಲು ಗುರುವಾರ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಮನೆ ಮಂದಿ ಆತಂಕಕ್ಕೊಳಾಗಿದ್ದರು. ಇದೇ ವೇಳೆ ಮನೆಯೊಳಗಿದ್ದ ಪ್ರಾರ್ಥನಾ ಪ್ರಭು ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಘುವೀರ ಪ್ರಭು ಕೆನರಾ ಬ್ಯಾಂಕ್‍ನಲ್ಲಿ ಸಾಲ ಹೊಂದಿದ್ದು ಕೋರ್ಟು ಆದೇಶದೊಂದಿಗೆ ಅಧಿಕಾರಿಗಳು ಮನೆ ಮುಟ್ಟುಗೋಲಿಗೆ ಬಂದಿದ್ದರು. ಈ ಸಂದರ್ಭ ಮುಟ್ಟುಗೋಲಿಗೆ ಭದ್ರತೆ ಒದಗಿಸಲು ಬಂದಿದ್ದ ಪೊಲೀಸರು ನೇಣು ಬಿಗಿದ ಸ್ಥಿತಿಯಲ್ಲಿದ್ದ ಪ್ರಾರ್ಥನಾ ಪ್ರಭು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಜಂಬುರಾಜ್ ಮಹಾಜ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ರಾಧಾಕೃಷ್ಣ ಭಕ್ತ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ, ಸದಾಶಿವ ಪೈ ಮತ್ತಿತರರು ಆಗಮಿಸಿ ಬ್ಯಾಂಕ್ ಅಧಿಕಾರಿಗಳ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು.
ಘಟನೆಯ ಕುರಿತು ಮೃತರ ಪತಿ ರಘುವೀರ್ ಪ್ರಭು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A woman in puttur ended her life after bank officials came to vacate their house over the repayment of a loan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm