ಬ್ರೇಕಿಂಗ್ ನ್ಯೂಸ್
22-02-21 06:14 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಬೆಂಗಳೂರು ಐಟಿ ಹಬ್ ಆದಂತೆ ಮಂಗಳೂರಿನಲ್ಲೂ ಸುಸಜ್ಜಿತ ತಂತ್ರಜ್ಞಾನ ಕೇಂದ್ರ ಒಂದನ್ನು ಆರಂಭಿಸಬೇಕೆಂಬ ಮಹತ್ತರ ಚಿಂತನೆ ಕಿಯೋನಿಕ್ಸ್ ಗೆ ಇದೆ. ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ವತಿಯಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು, ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಿಧಾನಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ.
ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಬೆಳೆಸುವ ಉದ್ದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಿ.ಎನ್, ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಉಪಸ್ಥಿತರಿದ್ದರು.
Keonics to organise Science Technology Program in Mangalore on 24th Feb said Harikrishna Bantwal.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm