ಬ್ರೇಕಿಂಗ್ ನ್ಯೂಸ್
27-02-21 09:07 pm Mangaluru correspondant ಕರಾವಳಿ
ಉಡುಪಿ, ಫೆ.27 : ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಸುಳ್ಳು. ಯಾರು ಕೂಡ ಯಾರನ್ನೂ ಟಾರ್ಗೆಟ್ ಮಾಡಿಲ್ಲ , ಮಾಡುವುದೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಶನಿವಾರ ಬೈಂದೂರಿನಲ್ಲಿ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹೆಜಮಾಡಿಯಿಂದ ಬೈಂದೂರು ವರೆಗಿನ ಜನಧ್ವನಿ ಪಾದಯಾತ್ರೆಯ ಸಮಾರೋಪ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್‌ನವರು ನಮಗೆ ಮೇಯರ್ ಸ್ಥಾನವನ್ನು ಕೊಡುತ್ತೇವೆ ಎಂದಿದ್ದರು. ಕೊನೆ ಗಳಿಗೆಯಲ್ಲಿ ಜೆಡಿಎಸ್ ಪಕ್ಷದವರೇ ನಾಮಪತ್ರ ಸಲ್ಲಿಸಿದ್ದಾರೆ. ನಾವು ನಮ್ಮ ಪಕ್ಷದಲ್ಲಿ ಅಧಿಕಾರ ಉಳಿಸಿಕೊಳ್ಳಬೇಕು ಎಂದು ಪ್ರಯತ್ನ ಮಾಡಿದೆವು. ಆದರೆ ಒಳಗಡೆ ಅವರು ತೀರ್ಮಾನ ಮಾಡಿಕೊಂಡಿದ್ದು ಎಡವಟ್ಟು ಆಗಿದೆ ಎಂದು ಡಿಕೆಶಿ ವಿವರಿಸಿದರು.
ಈ ಬಗ್ಗೆ ನಾನು ವರದಿ ತರಿಸಿಕೊಳ್ಳುತ್ತೇನೆ. ಈ ವಿಚಾರದಲ್ಲಿ ಸಿದ್ದರಾಮಯ್ಯನವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಸುಳ್ಳು. ಈ ವಿಚಾರದಲ್ಲಿ ಯಾರ ಹೆಸರಿಗೂ, ಗೌರವಕ್ಕೂ ಧಕ್ಕೆ ಬಾರದಂತೆ ನಾನು ನೋಡಿಕೊಳ್ಳುತ್ತೇನೆ. ಯಾರನ್ನು ಕಟ್ಟಿ ಹಾಕೋದಕ್ಕೆ ನಾನು ಅವಕಾಶ ಕೊಡುವುದಿಲ್ಲ ಎಂದು ಅವರು ಹೇಳಿದರು.
ತನ್ವೀರ್ ಸೇಠ್ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ನಾಯಕರ ಬಗ್ಗೆ ಯಾರು ಸಹ ಅವಹೇಳನಕಾರಿ ಹೇಳಿಕೆ ಕೊಡುವಂತಿಲ್ಲ. ಈ ಬಗ್ಗೆ ಪಕ್ಷದ ನಿಲುವು ಸ್ಪಷ್ಟವಾಗಿದೆ. ತನ್ವೀರ್ ಸೇಠ್ ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. ತನ್ವೀರ್ ಸೇಠ್ ಗೆ ಸೋಮವಾರ ನನ್ನನ್ನು ಭೇಟಿಯಾಗಲು ತಿಳಿಸಿದ್ದೇನೆ ಎಂದರು.
ಪರೇಶ್ ಮೇಸ್ತ ತನಿಖೆ ಏನಾಯಿತು ?
ಕಳೆದ ಚುನಾವಣೆ ಸಂದರ್ಭದಲ್ಲಿ ಕರಾವಳಿಯಲ್ಲಿ ಭಾರೀ ವಿವಾದ ಎಬ್ಬಿಸಿದ ಭಟ್ಕಳದ ಪರೇಶ್ ಮೇಸ್ತ ನಿಗೂಢ ಸಾವಿನ ಪ್ರಕರಣದ ಸಿಬಿಐ ತನಿಖೆ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಪರೇಶ್ ಮೇಸ್ತ ಸಾವಿಗೆ ನ್ಯಾಯ ದೊರಕಿಸಲು ನಾವು ಸಿಬಿಐ ತನಿಖೆಗೆ ಕೊಟ್ಟಿದ್ದೆವು. ಈಗ ಬಿಜೆಪಿ ಸರಕಾರ ಇದೆ. ಬಿಜೆಪಿಯವರಿಗೆ ತನಿಖೆ ಮಾಡಲು ಏನು ಕಷ್ಟ ಎಂದು ಖಾರವಾಗಿ ಪ್ರಶ್ನಿಸಿದ ಡಿಕೆ ಶಿವಕುಮಾರ್, ಪರೇಶ್ ಮೇಸ್ತ ಸಾವಿನ ಸತ್ಯಾಸತ್ಯತೆ ಏನು ಎಂದು ಜನರಿಗೆ ಗೊತ್ತಾಗಬೇಕು ಎಂದರು.
ಸಿಬಿಐ ತನಿಖೆ ಹಳ್ಳ ಹಿಡಿದಿರುವುದನ್ನು ಗಮನಿಸಿದರೆ ಬಿಜೆಪಿಯವರೇ ಇದರಲ್ಲಿ ಭಾಗಿಯಾಗಿದ್ದಾರೆ ಎನ್ನೋದು ಸ್ಪಷ್ಟ. ಉಳಿದದ್ದೆಲ್ಲವನ್ನು ತುರ್ತಾಗಿ ಮಾಡುವ ಬಿಜೆಪಿ ಈ ಪ್ರಕರಣವನ್ನು ಯಾಕೆ ಮುಚ್ಚಿ ಹಾಕುತ್ತಿದೆ ಎನ್ನುವುದು ತಿಳಿಯುತ್ತಿಲ್ಲ. ಬಿಜೆಪಿ ನನ್ನ ಮೇಲೆ ಸಿಬಿಐ ತನಿಖೆ ತುರ್ತಾಗಿ ಮಾಡಿದೆ. ಅಧಿಕಾರ ದುರುಪಯೋಗ ಮಾಡಿಕೊಂಡು ನನಗೂ ತೊಂದರೆ ಕೊಟ್ಟಿದೆ. ಆದರೆ ಮೇಸ್ತ ಪ್ರಕರಣದಲ್ಲಿ ಯಾಕೆ ಈ ವಿಳಂಬ ಧೋರಣೆ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು.
ಪಂಚಮ ಸಾಲಿ ಹೋರಾಟದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಮತ್ತು ಮಠದ ವಿಚಾರವನ್ನು ಈಗ ಮಾತನಾಡುವುದಿಲ್ಲ. ಪಕ್ಷದ ನಾಯಕರ ಜೊತೆ ಮಾತನಾಡಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದರು.
“Why do we need a Government that does not respond to the grievances of people during the corona pandemic?” asked Karnataka Pradesh Congress Committee (KPCC) President D K Shivakumar.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm