ಹೊಸ್ಮಠ ಸೇತುವೆ ಬಳಿ ಸ್ಕೂಟರ್ ಪಲ್ಟಿ ; ವೃದ್ಧ ಮಹಿಳೆ ಮೃತ್ಯು

28-02-21 12:53 pm       Mangaluru correspondent   ಕರಾವಳಿ

ಇಲ್ಲಿನ ಹೊಸ್ಮಠ ಸೇತುವೆಯ ಬಳಿ ರಸ್ತೆ ಹಂಪ್ ಗಮನಿಸದೆ ದ್ವಿಚಕ್ರ ವಾಹನ ಚಲಾಯಿಸಿದ ಪರಿಣಾಮ ಮಹಿಳೆಯೊಬ್ಬರು ಪಲ್ಟಿಯಾಗಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. 

ಕಡಬ, ಫೆ.28 : ಇಲ್ಲಿನ ಹೊಸ್ಮಠ ಸೇತುವೆಯ ಬಳಿ ರಸ್ತೆ ಹಂಪ್ ಗಮನಿಸದೆ ದ್ವಿಚಕ್ರ ವಾಹನ ಚಲಾಯಿಸಿದ ಪರಿಣಾಮ ಮಹಿಳೆಯೊಬ್ಬರು ಪಲ್ಟಿಯಾಗಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. 

ಮೃತ ಮಹಿಳೆಯನ್ನು ವೇಣೂರಿನ ಬಜಾಲು ಸಮೀಪದ ನಿವಾಸಿ ವೆಂಕಪ್ಪ ಸಾಲ್ಯಾನ್ ಎಂಬವರ ಪತ್ನಿ ಸುಂದರಿ (65) ಎಂದು ಗುರುತಿಸಲಾಗಿದೆ.

ಮೃತ‌ ಮಹಿಳೆ ತನ್ನ ಮೊಮ್ಮಗನೊಂದಿಗೆ ಇಂದು ಬೆಳಗ್ಗೆ ವೇಣೂರಿನಿಂದ ಕಡಬಕ್ಕೆಂದು ಹೊರಟಿದ್ದು, ಮಂಜು ಆವರಿಸಿದ್ದರಿಂದ ಹಂಪ್ ಗೋಚರಿಸದೆ ದ್ವಿಚಕ್ರ ವಾಹನ ಪಲ್ಟಿಯಾಗಿದೆ. ರಸ್ತೆಗೆಸೆಯಲ್ಪಟ್ಟ ಸುಂದರಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

56-year-old woman fell to her death from a moving motorbike after it hit a speed breaker in Kadaba, Managalore.