ಕೊರೊನಾ ಸೋಂಕಿತರಿಂದ ಹೆಚ್ಚು ಹಣ ವಸೂಲಿ ಮಾಡಿದಲ್ಲಿ ಕಠಿಣ ಕ್ರಮ -ದ.ಕ. ಡಿಸಿ ಎಚ್ಚರಿಕೆ

31-07-20 03:00 pm       Mangalore Reporter   ಕರಾವಳಿ

ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರಕಾರ ನಿಗದಿ ಮಾಡಿರುವ ದರಪಟ್ಟಿಗಿಂತ ಹೆಚ್ಚಿನ ಹಣವನ್ನು ಆಸ್ಪತ್ರೆಗಳು ವಸೂಲಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರಕಾರ ನಿಗದಿ ಮಾಡಿರುವ ದರಪಟ್ಟಿಗಿಂತ ಹೆಚ್ಚಿನ ಹಣವನ್ನು ಆಸ್ಪತ್ರೆಗಳು ವಸೂಲಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಜಿಲ್ಲಾಧಿಕಾರಿ, ಈಗಾಗಲೇ 50 ಸಾವಿರ ಮಂದಿಯ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 5,504 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. 2,568 ಮಂದಿ ಗುಣ ಮುಖರಾಗಿದ್ದಾರೆ. 2,800 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 142 ಮಂದಿ ಮ್ರತಪಟ್ಡಿದ್ದಾರೆ. 415 ಕೋವಿಡ್ ಕೇಂದ್ರಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಯ 61 ಆಸ್ಪತ್ರೆಗಳಲ್ಲಿ 4,608 ಹಾಸಿಗೆಗಳು ಕೋವಿಡ್ ಸೋಂಕಿತರಿಗೆ ಸಿದ್ಧವಾಗಿದೆ ಎಂದು ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ರೂಪಾ ಉಪಸ್ಥಿತರಿದ್ದರು.