ಹೆಬ್ರಿ ; ಬೈಕಿಗೆ ಜಿಂಕೆ ಡಿಕ್ಕಿಯಾಗಿ ಸಾವು

03-03-21 05:14 pm       Udupi Correspondent   ಕರಾವಳಿ

ಬೈಕ್ ಡಿಕ್ಕಿಯಾಗಿ ಜಿಂಕೆಯೊಂದು ಮೃತಪಟ್ಟ ಘಟನೆ ಕನ್ಯಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕಾರ್ಕಳ, ಮಾ.3: ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಕನ್ಯಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಖಾಸಗಿ ಬಸ್ ಚಾಲಕ ಹರೀಶ್ ಎಂಬವರು ಚಲಾಯಿಸುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಬಳಿಕ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಅಪಘಾತದಿಂದ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಅಸುನೀಗಿದೆ. ಈ ನಡುವೆ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡ ಬೈಕ್ ಸವಾರ ಹರೀಶ್ ಆಸ್ಪತ್ರೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಹೆಬ್ರಿ ಪೊಲೀಸರು ಹಾಗೂ ಹೆಬ್ರಿ ವಲಯ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Deer Killed after bike rams on it in Hebri, Karkala. The incident happened when the deer was crossing the road.