ಬ್ರೇಕಿಂಗ್ ನ್ಯೂಸ್
06-03-21 05:44 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಮಗನ ಸ್ಕೂಲ್ ಫೀಸ್ ಕಟ್ಟಲೆಂದು ಎತ್ತಿಟ್ಟಿದ್ದ ಹಣನ್ನು ಹಿಂದಿನ ಸಿಸಿಬಿ ಪೊಲೀಸರು ದೋಚಿದ್ದಾರೆ ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರಿಗೆ ಪಾಂಡೇಶ್ವರ ನಿವಾಸಿ ವಿನಯಾ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ದೂರಿನೊಂದಿಗೆ ಈ ಹಿಂದಿನ ಸಿಸಿಬಿ ಪೊಲೀಸ್ ತಂಡದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
2019ರ ಅಕ್ಟೋಬರ್‌ನಲ್ಲಿ ಸಿಸಿಬಿ ಅಧಿಕಾರಿಗಳು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಅಂಗಡಿಯ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಪೊಲೀಸರು ಅಂಗಡಿಯಲ್ಲಿದ್ದ ಬ್ಯಾಗ್ನಿಂದ 86,000 ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಣ ಮಗನ ಶಾಲಾ ಶುಲ್ಕಕ್ಕೆ ಇಟ್ಟಿದ್ದಾಗಿತ್ತು. ತನಗೆ ನ್ಯಾಯ ದೊರಕಿಸಿಕೊಡಿ ಎಂದು ಮಹಿಳೆ ವಿನಯ ಗಾಂವ್ಕರ್ ಬಳಿ ದೂರು ನೀಡಿದ್ದಾರೆ.
ಕಬ್ಬಾಳ್ ರಾಜ್ ಮಂಗಳೂರು ಸಿಸಿಬಿ ಎಸ್ಐ ಆಗಿದ್ದಾಗ ಈ ಲೂಟಿ ನಡೆದಿದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಬ್ಬಾಳರಾಜ್ ಎಸ್ಐ ಆಗಿದ್ದ ಸಿಸಿಬಿ ತಂಡದ ವಿರುದ್ಧ ಸರಣಿಯಂತೆ ಆರೋಪ ಕೇಳಿಬಂದಿದ್ದು, ಪೊಲೀಸ್ ವಶದಲ್ಲಿದ್ದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣದಲ್ಲಿ ಈಗಾಗ್ಲೇ ನಾಲ್ವರು ಸಸ್ಪೆಂಡ್ ಆಗಿದ್ದಾರೆ. ಪ್ರಕರಣದಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೀಡಿರುವ ವರದಿ ಆಧರಿಸಿ, ಡಿಜಿಪಿ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿದ್ದಾರೆ.
ಮೂರು ಐಷಾರಾಮಿ ಕಾರುಗಳಲ್ಲಿ ಜಾಗ್ವಾರ್ ಕಾರನ್ನು ಮಾರಾಟ ಮಾಡಿದ್ದು ಸಿಐಡಿಗೆ ಮಂಗಳೂರು ಪೊಲೀಸ್ ಅಧಿಕಾರಿಗಳ ತಂಡ ಎಫ್ಐಆರ್ ಸಹಿತ ವರದಿ ಸಲ್ಲಿಸಿದೆ. ಪಿಎಸ್ಸೈ ಕಬ್ಬಾಳ್ ರಾಜ್, ನಾರ್ಕೋಟಿಕ್ ಇನ್ಸ್ಪೆಕ್ಟರ್ ರಾಮಕೃಷ್ಣ ಮತ್ತು ರಾಜಾ ವಿರುದ್ಧ ವರದಿ ದಾಖಲಾಗಿದ್ದು, ಪೊಲೀಸ್ ಬ್ರೋಕರ್ ದಿವ್ಯದರ್ಶನ್ ವಿರುದ್ಧ ವರದಿ ದಾಖಲಾಗಿದೆ.
Women files complaint on the old CCB police team alleging of stealing money of school fees during a raid at their residence in Mangalore.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm