ಬ್ರೇಕಿಂಗ್ ನ್ಯೂಸ್
11-03-21 10:28 pm Mangaluru correspondent ಕರಾವಳಿ
ಉಡುಪಿ, ಮಾರ್ಚ್ 11; ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಬಳಿಕ ಸರ್ವೀಸ್ ಬಸ್‌ಗಳಿಗೆ ಇದ್ದ ವಿನಾಯಿತಿ ರದ್ದುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಮಾರ್ಚ್ 15ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಖಾಸಗಿ ಬಸ್ ಮಾಲೀಕರು ತೀರ್ಮಾನಿಸಿದ್ದಾರೆ.
ಹೆಜಮಾಡಿ ಹಳೆ ಎಂಬಿಸಿ ರಸ್ತೆಯಲ್ಲಿ ಸಂಚಾರ ನಡೆಸುವ ಬಸ್‌ಗಳ ಮಾಲೀಕರು ಅನಿರ್ಧಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉಡುಪಿ ಕೆನರಾ ಷಟಲ್ ಬಸ್ ಸರ್ವೀಸ್ ಹಾಗೂ ಅದರ ಅಂಗ ಸಂಸ್ಥೆ ಕಿನ್ನಿಗೋಳಿ ವಲಯ ಬಸ್ ಮಾಲೀಕರ ಸಂಘ ಹಾಗೂ ವಿವಿಧ ಟೋಲ್ ವಿರೋಧಿ ಹೋರಾಟ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕಿನ್ನಿಗೋಳಿ ವಲಯ ಬಸ್ ಮಾಲೀಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ಈ ಕುರಿತು ಮಾಹಿತಿ ನೀಡಿದ್ದಾರೆ. "ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎನ್‌ಎಚ್‌ಎಐ ಅಧಿಕಾರಿಗಳು ಟೋಲ್ ವಿನಾಯಿತಿ ನೀಡುವ ಆಶ್ವಾಸನೆ ನೀಡಿದ್ದರು" ಎಂದರು.
"ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿವೆ. ಆದ್ದರಿಂದ, ಅನಿವಾರ್ಯವಾಗಿ ಬಸ್ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸಲು ತೀರ್ಮಾನಿಸಿದ್ದೇವೆ. ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶ ಮಾಡಬೇಕು" ಎಂದು ಆಗ್ರಹಿಸಿದ್ದಾರೆ.
ಬಸ್‌ಗಳಿಗೆ ವಿನಾಯಿತಿ ನೀಡಬೇಕು, ಸುರತ್ಕಲ್ ಟೋಲ್ ತೆರವುಗೊಳಿಸಬೇಕು. ಇಲ್ಲವಾದಲ್ಲಿ ವಿವಿಧ ಸಂಘಟನೆಗಳ ಜೊತೆ ಸೇರಿ ಬೃಹತ್ ಹೋರಾಟ ರೂಪಿಸಲಾಗುತ್ತದೆ. ಟೋಲ್ ಪ್ಲಾಜಾಗಳಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
Private Bus owners of Mangalore to resume services on March 15 as Hejamadi Toll plaza Is not giving them discounted price after Fastag.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm