ಬ್ರೇಕಿಂಗ್ ನ್ಯೂಸ್
14-03-21 06:29 pm Udupi Correspondent ಕರಾವಳಿ
ಮೂಡುಬಿದ್ರೆ, ಮಾ.13: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಕರಿಂಜೆಯ ಒಂದೇ ಮನೆಯ ತಾಯಿ, ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಕರಿಂಜೆಯ ಸುವರ್ಣನಗರ ನಿವಾಸಿ ಜ್ಯೋತಿ ಮಣಿ (36), ಆಕೆಯ ಮಕ್ಕಳಾದ ದೆಬೋರ (11), ಜುಡಾ ಇಮಾನ್ವೇಲ್ (10), ಎಪ್ಸಿಬಾ (8) ಹಾಗೂ ಆಕೆಯ ಅತ್ತೆ ಮನೋರಂಜಿತಂ (56) ನಾಪತ್ತೆಯಾದವರು.
ಜಯರಾಜ್ ಶೇಖರ್ ಎಂಬವರ ಪತ್ನಿ ಜ್ಯೋತಿಮಣಿ (36) ಎಂಬವರು ಮಾ.10ರಂದು ತನ್ನ ಮೂವರು ಮಕ್ಕಳು ಹಾಗೂ ಅತ್ತೆ ಮನೋರಂಜಿತಂ ಜೊತೆ ನಾಪತ್ತೆಯಾಗಿದ್ದಾರೆ. ಈ ಸಂದರ್ಭ ಇವರು ಗೋದ್ರೆಜ್ ಲಾಕರಿ ನಲ್ಲಿ ಇರಿಸಿದ್ದ ಬಂಗಾರದ ಆಭರಣ ಮತ್ತು 1.40 ಲಕ್ಷ ರೂ. ನಗದನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮಹಿಳೆ ಪತಿಯ ಗಮನಕ್ಕೆ ಬಾರದಂತೆ ತನ್ನ ಬಂಗಾರದ ಒಡವೆಗಳನ್ನು ಫೈನಾನ್ಸ್ ನಲ್ಲಿ ಅಡಮಾನ ಇಟ್ಟಿದ್ದು ಇದರಿಂದ ಬಂದ 1.80 ಲಕ್ಷ ರೂ.ವನ್ನು ಆಕೆಯ ಸ್ನೇಹಿತನಿಗೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ಪತಿ ಅಡ ಇಟ್ಟ ಒಡವೆಗಳನ್ನು ಬಿಡಿಸಿ ಬರುವಂತೆ ಪತಿ ಸೂಚಿಸಿದ ಬೆನ್ನಲ್ಲೇ ಮನೆಯಿಂದ ಪರಾರಿಯಾಗಿದ್ದಾರೆ.
ಮಹಿಳೆಯು ತನ್ನ ತವರು ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mother three kids and grandmother of a family go missing in Moodbidri, Mangalore. The Police are now investigating the case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm