ಬ್ರೇಕಿಂಗ್ ನ್ಯೂಸ್
18-03-21 03:57 pm Mangalore Correspondent ಕರಾವಳಿ
ಮಂಗಳೂರು, ಮಾ.18: ಕೇಂದ್ರ ಸರಕಾರ ದಕ್ಷಿಣ ಕನ್ನಡವನ್ನು ಹೈರಿಸ್ಕ್ ಝೋನ್ ಎಂದು ಪಟ್ಟಿ ಮಾಡಿರುವ ಬೆನ್ನಲ್ಲೇ ಕೊರೊನಾ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಗದಾ ಪ್ರಹಾರಕ್ಕೆ ಮುಂದಾಗಿದ್ದಾರೆ. ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರದ ಬಗ್ಗೆ ಜನರು ಹೆಚ್ಚು ತಲೆಕೆಡಿಸಿಕೊಳ್ಳದ ಕಾರಣ ಜಿಲ್ಲಾಧಿಕಾರಿಗಳು ಹೊಸ ರೀತಿಯ ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳನ್ನು ಒಳಪಡಿಸಿ ಫೀಲ್ಡಿಗೆ ಇಳಿಸಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಚಿಂತನೆ ನಡೆಸಿದ್ದಾರೆ. ಪ್ರತಿ ದಿನವೂ ಅಧಿಕಾರಿ ವರ್ಗ ಒಂದು ಗಂಟೆ ಕಾಲ ಫೀಲ್ಡಿಗೆ ತೆರಳಬೇಕು. ಬಸ್, ಇನ್ನಿತರ ವಾಹನ, ಜನನಿಬಿಡ ಪ್ರದೇಶಗಳಲ್ಲಿ ತಪಾಸಣೆ ನಡೆಸಬೇಕು. ಸಭೆ, ಸಮಾರಂಭಗಳು ನಡೆಯುವ ಹಾಲ್ ಗಳಲ್ಲಿ ಜನರು ಮಾಸ್ಕ್ ಹಾಕಿದ್ದಾರೋ, ನಿಗದಿಗಿಂತ ಹೆಚ್ಚು ಜನ ಭಾಗವಹಿಸಿದ್ದಾರೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಸಾರಿಗೆ ವಾಹನಗಳಲ್ಲಿ ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದರೆ, ಚಾಲಕ, ನಿರ್ವಾಹಕನಿಗೆ ದಂಡ ವಿಧಿಸಲು ಸೂಚನೆ ನೀಡಿದ್ದಾರೆ.


ತಪಾಸಣೆ ನಡೆಸುವ ಸಂದರ್ಭದಲ್ಲಿ ಮದುವೆ ಸಮಾರಂಭದ ಹಾಲ್ ಗಳಲ್ಲಿ ಮಾರ್ಗಸೂಚಿ ಪಾಲನೆ ಆಗಿಲ್ಲದಿದ್ದರೆ, ಅದರ ಮಾಲೀಕರಿಗೆ ದಂಡ ವಿಧಿಸುವುದು. ಮಾಲ್ ಗಳಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಜನ ಗುಂಪು ಕೂಡಿದ್ದರೆ ಮಾಲ್ ಮಾಲೀಕರಿಗೆ ದಂಡ ಮತ್ತು ಪ್ರಕರಣ ದಾಖಲಿಸುವುದು, ಸಿನಿಮಾ ಥಿಯೇಟರ್ ಗಳಲ್ಲಿ ಒಬ್ಬ ಮಾಸ್ಕ್ ಹಾಕಿರದೇ ಇದ್ದರೂ, ಟಾಕೀಸ್ ಮಾಲೀಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದ್ದಾರೆ.

ಹೊಸ ಪ್ರಯೋಗದಲ್ಲಿ ಎಸಿಪಿ, ಡಿಸಿಪಿ ದರ್ಜೆಯ ಪೊಲೀಸ್ ಅಧಿಕಾರಿಗಳು, ಜಿಪಂ ಸಿಇಓ, ಪಾಲಿಕೆ ಕಮಿಷನರ್, ಜಿಲ್ಲಾ ಮಟ್ಟದ ಪ್ರಮುಖ ಇಲಾಖಾ ಮುಖ್ಯಸ್ಥರು ಹೀಗೆ ಐಪಿಎಸ್, ಐಎಎಸ್ ದರ್ಜೆಯ ಅಧಿಕಾರಿಗಳು ಒಳಗೊಳ್ಳಲಿದ್ದು, ಅಧಿಕಾರಿ ವರ್ಗ ದಿನದಲ್ಲಿ ಒಂದು ಗಂಟೆ ಫೀಲ್ಡಿಗೆ ತೆರಳಿ, ಕೊರೊನಾ ನಿರ್ಬಂಧ ನಿಯಮಗಳ ಕಟ್ಟುನಿಟ್ಟಿನ ಪಾಲನೆಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಸಹಕಾರ ನೀಡದಿದ್ದರೇ, ಅಧಿಕಾರಿಗಳ ಮೂಲಕವೇ ಪರೋಕ್ಷ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು ಹೊಸ ಉಪಾಯ ಹೂಡಿದ್ದಾರೆ. ತಕ್ಷಣದಿಂದಲೇ ಅಧಿಕಾರಿಗಳು ಫೀಲ್ಡಿಗೆ ಬರಲಿದ್ದು, 15 ದಿನಗಳ ಕಾಲ ಈ ರೀತಿಯ ದಂಡ ಪ್ರಯೋಗ ನಡೆಸಲಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Read: ಕೋವಿಡ್ ; ಹೈರಿಸ್ಕ್ ಝೋನಲ್ಲಿ ಮಂಗಳೂರು ! ದೇಶದಲ್ಲಿ 70 ಜಿಲ್ಲೆಗಳ ಪಟ್ಟಿ ಬಿಡುಗಡೆ
Mangalore DC Rajendra Kumar orders new rules to Malls and Theaters, Market places and general public to avoid Covid Second Wave.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm