ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.

ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm