ಬ್ರೇಕಿಂಗ್ ನ್ಯೂಸ್
 
            
                        20-03-21 04:50 pm Mangalore Correspondent ಕರಾವಳಿ
 
            ಉಳ್ಳಾಲ, ಮಾ.20 : ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ ಹತ್ತಿಕೊಂಡು ಗುಜರಿ ಅಂಗಡಿಯಲ್ಲಿದ್ದ ಪರಿಕರಗಳು ಧಗ ಧಗಿಸಿದ್ದು ಅಂಗಡಿಯಲ್ಲಿದ್ದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಆಡಂಕುದ್ರುವಿನ ಐವನ್ ಡಿ ಸೋಜಾ ಎಂಬವರ ಜಾಗದಲ್ಲಿ ಬಾಡಿಗೆ ಆಧಾರದಲ್ಲಿ ಅನ್ವರ್ ಎಂಬವರು ಗುಜರಿ ವಹಿವಾಟು ನಡೆಸುತ್ತಿದ್ದು ಇಂದು ಮಧ್ಯಾಹ್ನ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ. ಅದಾಗಲೇ ಅಲ್ಲಿನ ಕಾರ್ಮಿಕರು ಅಂಗಡಿಯಿಂದ ಹೊರಬಂದು ಸಾಮಾನುಗಳನ್ನು ಹೊರಗಡೆ ಸಾಗಿಸುವ ಕೆಲಸದಲ್ಲಿ ತೊಡಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಗುಜರಿ ಅಂಗಡಿ ಹೊತ್ತಿ ಉರಿದಿದ್ದು ಅಪಾರ ಪ್ರಮಾಣದ ಗುಜರಿ ಪರಿಕರಗಳು ಬೆಂಕಿಗಾಹುತಿಯಾಗಿವೆ. ಅಂಗಡಿಯ ಹೊರಗಡೆಯೂ ಅಪಾರ ಪ್ರಮಾಣದ ಗುಜರಿಯನ್ನು ದಾಸ್ತಾನು ಇರಿಸಲಾಗಿತ್ತು. ಬೆಂಕಿಯ ಕೆನ್ನಾಲಿಗೆಗೆ ಜನರೇಟರ್ ಸೇರಿದಂತೆ ತೆಂಗಿನ ಮರವೊಂದು ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
 
            
            
             
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm