ವಿದ್ಯುತ್ ಉತ್ಪಾದನೆಯಲ್ಲಿ ತಾಂತ್ರಿಕ ದೋಷ ; ಮೆಸ್ಕಾಂ ವ್ಯಾಪ್ತಿಗೆ ಒಂದು ವಾರ ಕಾಲ ವಿದ್ಯುತ್ ವ್ಯತ್ಯಯ !

21-03-21 11:36 am       Mangaluru correspondent   ಕರಾವಳಿ

ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ವರೆಗೆ ಮಂಗಳೂರು ಸೇರಿ ಕರಾವಳಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ. 

ಮಂಗಳೂರು, ಮಾ.21: ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ವರೆಗೆ ಮಂಗಳೂರು ಸೇರಿ ಕರಾವಳಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ. 

ಕರ್ನಾಟಕ ಪವರ್ ಕಾರ್ಪೊರೇಷನ್ ನಿಂದ 2864 ಮೆ.ವ್ಯಾಟ್, ಯುಪಿಸಿಎಲ್ ನಿಂದ 1010 ಮೆಗಾ ವ್ಯಾಟ್ ಮತ್ತು ಕೇಂದ್ರೀಯ ಘಟಕಗಳಿಂದ 407 ಮೆ. ವ್ಯಾಟ್ ವಿದ್ಯುತ್ ಕೊರತೆ ಹೊಂದಿದ್ದು ರಾಜ್ಯದ ವಿದ್ಯುತ್ ಜಾಲಕ್ಕೆ ಒಟ್ಟು ಪೂರೈಕೆಯಲ್ಲಿ 4281 ಮೆಗಾ ವ್ಯಾಟ್ ನಷ್ಟು ಪ್ರಮಾಣದ ವಿದ್ಯುತ್ ಕೊರತೆ ಎದುರಾಗಿದೆ. ಇದರಿಂದಾಗಿ ಮೆಸ್ಕಾಂ ವ್ಯಾಪ್ತಿಗೆ 200 ಮೆಗಾ ವ್ಯಾಟ್ ವಿದ್ಯುತ್ ಕೊರತೆಯಾಗುವ ಸಾಧ್ಯತೆಯಿದೆ. 

Kankanadi - Wikipedia

ಆದುದರಿಂದ ಸ್ಟೇಟ್ ಲೋಡ್ ಡಿಸ್ಪೇಚ್ ಸೆಂಟರಿನ ಸೂಚನೆಯಂತೆ ಮೆಸ್ಕಾಂ ವ್ಯಾಪ್ತಿಯ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡುಬರಬಹುದು. 

ನೀರಾವರಿ ಪಂಪ್ ಸೆಟ್ ಗಳಿಗೆ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತ್ತು ಮಧ್ಯರಾತ್ರಿಯಿಂದ ಬೆಳಗ್ಗೆ 4 ಗಂಟೆ ವರೆಗೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ. ಮುಂದಿನ ವಾರದ ವೇಳೆಗೆ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆ ಆಗಲಿದ್ದು ಅಲ್ಲಿಯ ವರೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Due to a technical issue in the Generation of Electricity there shall be the outrage of electricity in Mangalore city says MESCOM.