ಬ್ರೇಕಿಂಗ್ ನ್ಯೂಸ್
22-03-21 09:56 am Mangaluru correspondent ಕರಾವಳಿ
ಉಳ್ಳಾಲ, ಮಾ.21: ಹೆದ್ದಾರಿಯಲ್ಲಿ ಅತಿವೇಗದಿಂದ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಸುವಿಗೆ ಬಲವಾಗಿ ಡಿಕ್ಕಿಯಾದ ಪರಿಣಾಮ ಹಸುವಿನ ಎರಡು ಕಾಲುಗಳು ಮುರಿದು ಗಂಭೀರ ಸ್ಥಿತಿಗೆ ತಲುಪಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಘಟನೆ ರಾ.ಹೆ. 66 ರ ಕೊಲ್ಯದಲ್ಲಿ ನಿನ್ನೆ ರಾತ್ರಿ ನಡೆದಿದೆ.


ಕೊಲ್ಯದ ದುರ್ಗಾಂಬಾ ಗ್ಯಾರೇಜ್ ಎದುರಲ್ಲಿ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವಾ ಕಾರು ರಸ್ತೆ ದಾಟುತ್ತಿದ್ದ ಹಸುವಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಸ್ಟೇರಿಂಗ್ ಸೇಫ್ಟಿ ಏರ್ ಬ್ಯಾಗ್ ಓಪನ್ ಆಗಿದೆ. ಕಾರಿನಲ್ಲಿ ಕೇರಳ ಮೂಲದ ಮುಸ್ಲಿಂ ಧರ್ಮಗುರುವೊಬ್ಬರು ಇದ್ದರು. ಚಾಲಕನ ಧಾವಂತದ ಚಾಲನೆಯಿಂದಾಗಿ ಕಾರು ಹಸುವಿಗೆ ಡಿಕ್ಕಿಯಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.


ಹಸು ಚಿಂತಾಜನಕ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವುದನ್ನ ಕಂಡ ಸ್ಥಳೀಯರು ಉದ್ರಿಕ್ತಗೊಂಡಿದ್ದಾರೆ. ಕೆಲಹೊತ್ತಿನಲ್ಲಿ ಮುಸ್ಲಿಂ ಗುಂಪು ಕೂಡ ಜಮಾವಣೆಗೊಂಡಿದ್ದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೆದ್ದಾರಿ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಜನರನ್ನು ಚದುರಿಸಿ ಸಂಚಾರ ಸುಗಮಗೊಳಿಸಿದ್ದಾರೆ.

ಗಾಯಗೊಂಡಿದ್ದ ಹಸುವನ್ನು ಸ್ಥಳೀಯರು ಮತ್ತು ಸಂಘಟನೆ ಕಾರ್ಯಕರ್ತರು ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಿದ್ದಾರೆ.
A cow was hit by a speeding Innova car at Kolya in Mangalore. The cow is said to be in a serious condition.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm