ಬ್ರೇಕಿಂಗ್ ನ್ಯೂಸ್
22-03-21 12:23 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ಹೈವೇ ರಸ್ತೆಯಲ್ಲಿ ಸ್ಕೂಟರ್ ಸವಾರ ತಿರುವು ಪಡೆಯುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಹತ್ತಿ ಸ್ಕೂಟರ್ ಮೇಲೆ ಹರಿದ ಘಟನೆ ಗಡಿಭಾಗ ತಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ.


ಗಾಯಾಳುವನ್ನು ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ತುಳಸಿ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗಡಿಭಾಗ ತಲಪಾಡಿಯಲ್ಲಿ ಸ್ಕೂಲ್ ಬಸ್ಸೊಂದು ಇನ್ನೊಂದು ರಸ್ತೆಗೆ ತಿರುವು ಪಡೆಯುವ ಯತ್ನದಲ್ಲಿದ್ದಾಗ ಕೇರಳ ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯಕ್ಕೆ ನುಗ್ಗಿ ಬಂದಿದೆ. ಇದೇ ವೇಳೆ, ಮತ್ತೊಂದು ರಸ್ತೆಯಿಂದ ಸ್ಕೂಟರ್ ಸವಾರ ತಿರುವು ಪಡೆಯಲು ಬಂದಿದ್ದು ಕೆಎಸ್ಸಾರ್ಟಿಸಿ ಬಸ್ ನೇರವಾಗಿ ಡಿವೈಡರ್ ಮತ್ತು ಸ್ಕೂಟರ್ ಮೇಲೆ ಹರಿದಿದೆ. ಸ್ಕೂಟರ್ ಬಸ್ಸಿನಡಿಗೆ ಸಿಲುಕಿ ಅಪ್ಪಚ್ಚಿಯಾಗಿದೆ.

ಶಾಲಾ ಬಸ್ ಚಾಲಕ ಅಜಾಗರೂಕತೆ ಚಾಲನೆಯಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತದೆ. ಸರಕಾರಿ ಬಸ್ ಚಾಲಕ, ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ್ದು ಆತನ ಸಮಯ ಪ್ರಜ್ಞೆಯಿಂದ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಸ್ಕೂಟರ್ ಚಾಲಕ ತುಳಸಿಯ ಎರಡೂ ಕಾಲು ಮುರಿತಕ್ಕೊಳಗಾಗಿದ್ದು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Video:
Live accident caught in CCTV of Ksrtc Bus and Scooter accident in Talapady, Mangalore
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm