ಬ್ರೇಕಿಂಗ್ ನ್ಯೂಸ್
27-03-21 02:08 pm Mangaluru correspondent ಕರಾವಳಿ
ಮಂಗಳೂರು, ಮಾರ್ಚ್ 27: ಖಾಸಗಿ ಕಾರಿನ ಚಾಲಕನೊಬ್ಬ ಸಮವಸ್ತ್ರ ಧರಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳ ಪೊಲೀಸರು 500 ರೂ. ದಂಡ ವಿಧಿಸಿದ ಘಟನೆ ನಡೆದಿದ್ದು ಈ ಬಗ್ಗೆ ತಿಳಿದ ಎಸ್ಪಿ ದಂಡದ ಹಣವನ್ನು ಹಿಂತಿರುಗಿ ಕೊಡಿಸಿದ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಖಾಸಗಿ ವಾಹನದ ಚಾಲಕರು ಸಮವಸ್ತ್ರ ಹಾಕಬೇಕೆಂಬ ನಿಯಮವಿಲ್ಲ. ಬಾಡಿಗೆ ನಡೆಸುವ ಕಾರುಗಳು ಅಂದರೆ, ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಇರುವ ವಾಹನಗಳಿಗೆ ಮಾತ್ರ ಚಾಲಕರು ಬಿಳಿ ಸಮವಸ್ತ್ರ ಧರಿಸಬೇಕೆಂಬ ನಿಯಮ ಇದೆ.
ಆದರೆ ಮಾ.23ರಂದು ಬಂಟ್ವಾಳ ಬಳಿಯ ರಾಮಲ್‌ಕಟ್ಟೆ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ಸಮವಸ್ತ್ರ ಧರಿಸದ ಕಾರಣಕ್ಕೆ ಪಾಣೆ ಮಂಗಳೂರು ಮೂಲದ ಕಾರು ಚಾಲಕರೊಬ್ಬರಿಗೆ 500 ರೂ. ದಂಡ ವಿಧಿಸಿದ್ದರು.
ಪೊಲೀಸರು ನೀಡಿದ ದಂಡದ ರಶೀದಿಯನ್ನು ನೋಡಿದ ಕಾರು ಚಾಲಕರ ಪುತ್ರ, ಅದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಗಮನಕ್ಕೆ ತಂದಿದ್ದಾರೆ. ಈ ವೇಳೆ ಎಸ್ಪಿ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಲ್ಲದೆ, ಪೊಲೀಸರು ಸಂಗ್ರಹಿಸಿದ್ದ ದಂಡದ ಮೊತ್ತವನ್ನು ಪೇದೆಯಲ್ಲಿ ಅದೇ ದಿನ ರಾತ್ರಿ ಹಿಂತಿರುಗಿಸಲು ಸೂಚನೆ ನೀಡಿದ್ದಾರೆ.
ಎಸ್ಪಿ ಸೂಚನೆಯಂತೆ ಪೊಲೀಸ್ ಪೇದೆ ನೇರವಾಗಿ ಖಾಸಗಿ ವಾಹನದಲ್ಲಿ ಪಾಣೆಮಂಗಳೂರಿಗೆ ನಡುರಾತ್ರಿಯಲ್ಲೇ ಬಂದು ಖಾಸಗಿ ಕಾರು ಚಾಲಕನ ಕೈಗೆ 500 ರೂ. ಹಿಂತಿರುಗಿಸಿದ್ದಾರೆ. ಪೊಲೀಸ್ ಅಧೀಕ್ಷಕರು ತುರ್ತಾಗಿ ಸ್ಪಂದಿಸಿದ ಕ್ರಮಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
Bantwal police have charged a fine of Rs 500 from a private car driver for not wearing his uniform. The son of a car driver who saw the receipt of the fine from the police brought it to the notice of the Dakshina Kannada District Superintendent of Police, BM Lakshmiprasad, who then returned the fine amount back to the driver.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm