ಏಪ್ರಿಲ್ 7 ರಂದು ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

03-04-21 04:48 pm       Mangalore Correspondent   ಕರಾವಳಿ

ಏಪ್ರಿಲ್ 7 ರಂದು ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಏಪ್ರಿಲ್ 03: ರಾಜ್ಯದ ವಿವಿಧೆಡೆ ವಿಪರೀತ ಸೆಕೆ ಆರಂಭವಾಗಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಎಲ್ಲಾ ಕಡೆಯೂ ಒಣಹವೆ ಮುಂದುವರೆದಿದೆ.

ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Heavy rains expected in dakshina Kannada including 6 districts of Karnataka states weather forecast department