ಬ್ರೇಕಿಂಗ್ ನ್ಯೂಸ್
05-04-21 01:22 pm Udupi Correspondent ಕರಾವಳಿ
ಉಡುಪಿ, ಎ.5 : ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮಹಿಳೆ ಮೃತಪಟ್ಟು ಮಕ್ಕಳು ಸಹಿತ 13 ಮಂದಿ ಗಾಯಗೊಂಡ ಘಟನೆ ಬ್ರಹ್ಮಾವರದ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ವಲಸೆ ಕಾರ್ಮಿಕರಾಗಿದ್ದು ಕಾಂಕ್ರೀಟ್ ಕೆಲಸ ಮುಗಿಸಿ ಭಾನುವಾರ ಸಂಜೆ 15 ಮಂದಿ ವಾಹನದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿ ಜನರೇಟರ್, ಕಾಂಕ್ರಿಟ್ ಮಿಕ್ಸಿಂಗ್ ಮೆಷಿನ್ ಕೂಡ ಇತ್ತು ಎಂದು ತಿಳಿದುಬಂದಿದೆ.
ಏಕಾಏಕಿ ವಾಹನ ಪಲ್ಟಿಯಾಗಿದ್ದರಿಂದ ವಾಹನದಡಿಗೆ ಸಿಲುಕಿದ್ದು, ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ 35 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮಕ್ಕಳು ಹಾಗೂ ಮಹಿಳೆಯರ ಚೀರಾಟ ಮನ ಕಲಕುವಂತಿತ್ತು. ಸ್ಥಳೀಯರು ಹಾಗೂ ಇತರ ವಾಹನ ಸವಾರರು ಅವರನ್ನು ರಕ್ಷಿಸಿ ಅಂಬುಲೆನ್ಸ್ ಹಾಗೂ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು. ಗಾಯಾಳುಗಳನ್ನು ಉಡುಪಿ ಜಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 12 ಮಂದಿ ದಾಖಲಾಗಿದ್ದು ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಬೇಜವಾಬ್ದಾರಿಯಿಂದ ಕಾರ್ಮಿಕರನ್ನು ಸಾಗಿಸುತ್ತಿದ್ದ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಬ್ರಹ್ಮಾವರ ಪೊಲೀಸರು ಹಾಗೂ ಹೈವೇ ಪಟ್ರೋಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Udupi truck carrying labourers topples one killed 15 injured. A case has been on contractor over negligence.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm