ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿಗೆ ರಾಜ್ಯ ಸಚಿವ ಸ್ಥಾನಮಾನ

05-04-21 04:55 pm       Mangalore Correspondent   ಕರಾವಳಿ

ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಮಂಗಳೂರು, ಎ.5 : ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಮಾಡಿದೆ. 

ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತರಾಗಿರುವ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಅಲೆಮಾರಿ, ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾಗಿದ್ದು ಪ್ರಸ್ತುತ ಇಡೀ ರಾಜ್ಯ ಪ್ರವಾಸಗೈದು ಅಲೆಮಾರಿಗಳ ಬಗ್ಗೆ ಕಾಳಜಿ ವಹಿಸಿ ಅವರ ಅಭಿವೃದ್ಧಿಗಾಗಿ ಕಾರ್ಯ ಪೃವೃತ್ತರಾಗಿದ್ದಾರೆ. ಅವರ ಕಾರ್ಯ ಚಟುವಟಿಕೆಗಳನ್ನ ಗಮನಿಸಿ ರಾಜ್ಯ ಸರಕಾರವು ರವೀಂದ್ರ ಶೆಟ್ಟಿ ಅವರನ್ನು ಸಚಿವ ಸ್ಥಾನಕ್ಕೆ ಸಮಾನವಾದ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. 

ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಶೆಟ್ಟರನ್ನು ಗುರುತಿಸಿ ರಾಜ್ಯ ಸರಕಾರ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿತ್ತು.